Thursday, September 19, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿ- ಚಂದೂಪುರ ಪಾಪಣ್ಣ

ಸರ್ಕಾರಿ ಶಾಲೆಗಳನ್ನು ಉಳಿಸಲು ಸರ್ಕಾರವು ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಜಿ.ಪಂ ಮಾಜಿ ಸದಸ್ಯ ಚಂದೂಪುರ ಪಾಪಣ್ಣ ತಿಳಿಸಿದರು.

ಮದ್ದೂರು ತಾಲ್ಲೂಕಿನ ಭಾರತೀನಗರ ಸಮೀಪದ ಚಂದೂಪುರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2022-23 ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕಗಳಿಸಿದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಅವರು ಮಾತನಾಡಿದರು.

ಗುಣಾತ್ಮ ಶಿಕ್ಷಣ ನೀಡಲು ಶಿಕ್ಷಕರು ಸಾಕಷ್ಟು ಶ್ರಮಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿಯೂ ಉತ್ತಮ ಶಿಕ್ಷಕರುಗಳಿದ್ದು, ಉತ್ತಮವಾದ ಪಠ್ಯ ಭೋಧನಾ ಕಾರ್ಯ ನಡೆಯುತ್ತಿದೆ. ಯಾರೂ ಈ ಶಾಲೆಗಳನ್ನು ಕಡೆಗಣಿಸಬಾರದು. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹವನ್ನು ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕೆಂದರು.

ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲ ನಾಗರಾಜು, ಶಿಕ್ಷಕರಾದ ರುದ್ರಪ್ಪ, ಶೋಭಾ, ರಮೇಶ್, ಶಾಂತರಾಜು, ನೇತ್ರಾವತಿ, ನವೀನ್, ಸಿಬ್ಬಂದಿ ವರ್ಗದವರು ಉಪಸ್ಥಿತರಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!