Friday, September 20, 2024

ಪ್ರಾಯೋಗಿಕ ಆವೃತ್ತಿ

ಚನ್ನಪಟ್ಟಣ ಉಪಚುನಾವಣೆ| ಬಿಜೆಪಿ ಟಿಕೆಟ್ ತಪ್ಪಿದರೆ ಪಕ್ಷೇತರವಾಗಿ ಕಣಕ್ಕೆ !

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಜಿದ್ದಾಜಿದ್ದಿನ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ತಪ್ಪಿದರೆ ಪಕ್ಷೇತರವಾಗಿ ಕಣಕ್ಕಿಳಿಯುವುದಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ಎನ್​ಡಿಎ ಅಭ್ಯರ್ಥಿಯಾಗಿಯೇ ನಾನು ಕಣಕ್ಕಿಳಿಯುತ್ತೇನೆ ಎಂದಿರುವ ಅವರು, ಒಂದು ವೇಳೆ ಪಕ್ಷದ ಟಿಕೆಟ್ ಕೈತಪ್ಪಿದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಚನ್ನಪಟ್ಟಣದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ಅವರನ್ನು ಬಿಜೆಪಿ ಹೈಕಮಾಂಡ್ ಮಾತುಕತೆಗೆ ಬರುವಂತೆ ದೆಹಲಿಗೆ ಕರೆದಿದೆ. ಸೋಮವಾಋ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದು ವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ಈಗಾಗಲೇ ನಮ್ಮ ಕ್ಷೇತ್ರದ ಜನ ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲ ಎಂದಾದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್‌ ಸೇರಲ್ಲ. ಇದುವರೆಗೆ ನನ್ನನ್ನು ಯಾವುದೇ ಕಾಂಗ್ರೆಸ್ ನಾಯಕರು ಸಂಪರ್ಕಿಸಿಲ್ಲ ಎಂದು ಯೋಗೇಶ್ವರ್‌ ಸ್ಪಷ್ಟಪಡಿಸಿದರು.

ಇದೇ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಯೋಗೇಶ್ವರ್ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಎಂಎಲ್ ಸಿ, “ನಾನು ಕಾಂಗ್ರೆಸ್ ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನ ಮಾತಾಡಿಸಿಯೂ ಇಲ್ಲ. ಡಿಕೆಶಿ ಅವರು ಏನೇನೋ ಮಾತಾಡ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತ ಗೊತ್ತಿದೆ’ ಎಂದು ಟಾಂಗ್ ನೀಡಿದರು.

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣಕ್ಕೆ ಸದ್ಯದಲ್ಲೇ ಉಪ ಚುನಾವಣೆ ನಡೆಯಲಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!