Thursday, September 19, 2024

ಪ್ರಾಯೋಗಿಕ ಆವೃತ್ತಿ

₹ 5 ಕೋಟಿ ವಂಚನೆ ಪ್ರಕರಣ| ಚೈತ್ರಾ ಸೇರಿದಂತೆ 9 ಆರೋಪಿಗಳ ವಿರುದ್ಧ 800 ಪುಟಗಳ ಚಾರ್ಜ್ ಶೀಟ್

ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡುವುದಾಗಿ ಆಮಿಷವೊಡ್ಡಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಮೂಲದ ಚೈತ್ರಾ ಸೇರಿದಂತೆ 9 ಮಂದಿ ಆರೋಪಿಗಳ ವಿರುದ್ಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡು ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ವ್ಯವಹಾರ​ಗಳು, ಸಾಂದರ್ಭಿಕ ಸಾಕ್ಷಿಗಳು, ಹಾಲಶ್ರೀ ಸ್ವಾಮೀಜಿ ಕಾರು ಚಾಲಕ ಹಣ ಇಟ್ಟುಹೋಗಿದ್ದ ಬಗ್ಗೆ ಸೇರಿದಂತೆ ಸ್ದಳ ಮಹಜರು ನಡೆಸಿ ಹಣ ವಶಪಡಿಸಿಕೊಂಡ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.

ಅಲ್ಲದೇ ಚೈತ್ರಾ ವಂಚನೆ ಪ್ರಕರಣದಲ್ಲಿ‌ ಈವರೆಗೆ ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ವಸೂಲಿ ಮಾಡಲಾಗಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ ಸ್ವಾಮೀಜಿ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ದೂರುದಾರ ಗೋವಿಂದ ಬಾಬು ಪೂಜಾರಿ ಬಳಿಯಲ್ಲಿದ್ದ ಎಲ್ಲ ಆಡಿಯೋ, ವಿಡಿಯೋವನ್ನು ಸಿಸಿಬಿ ಪೊಲೀಸರು ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಗೋವಿಂದ ಬಾಬು ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದ್ದು, ಆರೋಪಿಗಳ ಮೊಬೈಲ್‌ಗಳ ಡೇಟಾ ರಿಟ್ರೀವ್ ಮಾಡಿರುವುದನ್ನು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೈತ್ರಾ ವಂಚನೆ ಮಾಡಿದ್ದ ಸಂಬಂಧ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಸಂಘಪರಿವಾರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಚೈತ್ರಾ ಬಂಧನವಾಗುತ್ತಿದ್ದಂತೆಯೇ, ಇದು ರಾಜ್ಯಾದ್ಯಂತ ಬಹಳಷ್ಟು ಸುದ್ದಿಯಾಗಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!