Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ವಿದ್ಯುತ್ ಸ್ಪರ್ಶಿಸಿ ಚೆಸ್ಕಾಂ ಲೈನ್ ಮ್ಯಾನ್ ಸಾವು

ವಿದ್ಯುತ್ ಮಾರ್ಗದ ದುರಸ್ಥಿಗಾಗಿ ಕಂಬವೇರಿದ್ದ ಚೆಸ್ಕಾಂ ಲೈನ್ ಮ್ಯಾನ್ ಗೆ ಇದ್ದಕ್ಕಿದ್ದಂತೆ ವಿದ್ಯುತ್ ಸ್ಪರ್ಶಿಸಿ  ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಶುಕ್ರವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿ ಜರುಗಿದೆ.

ಶಿವನಸಮುದ್ರ ಭಾಗದಲ್ಲಿ ಲೈನ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 32 ವರ್ಷದ ಹರ್ಷದ್ ಎಂಬಾತ ಸಾವಿಗೀಡಾದವರು.

ಶಿವನಸಮುದ್ರ ತಿರುವಿನ ಪಕ್ಕದಲ್ಲೇ ವಿದ್ಯುತ್ ಕಂಬವೇರಿದ್ದ ಹರ್ಷದ್ ವಿದ್ಯುತ್ ಮಾರ್ಗದ ದುರಸ್ತಿ ಕಾರ್ಯದಲ್ಲಿ ತೊಡಗಿರುವಾಗಲೇ ಎಲ್.ಸಿ ತೆಗೆದುಕೊಂಡಿದ್ದಾಗ್ಯೂ ಏಕಾಏಕಿ ವಿದ್ಯುತ್ ಹರಿದಿದೆ ಎನ್ನಲಾಗಿದೆ.

ಸ್ಥಳಕ್ಕೆ ದೌಡಾಯಿಸಿರುವ ಚೆಸ್ಕಾಂ  ಹಿರಿಯ ಅಧಿಕಾರಿಗಳು ಘಟನೆ ಕುರಿತು ಪರಿಶೀಲನೆ ನಡೆಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಬೆಳಕವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಶವವನ್ನು ಮಳವಳ್ಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು ಆಸ್ಪತ್ರೆ ಆವರಣದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ