ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖ್ಯಾತ ಸಂಗೀತ ನಿರ್ದೆಶಕ ಹಂಸಲೇಖ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರು ನಗರ ರಾಜಾಜಿನಗರದ ಫಸ್ಟ್ ಬ್ಲಾಕ್ ನ ಅಪೋಲೊ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಸದ್ಯಕ್ಕೆ ಏನೂ ತೊಂದರೆ ಇಲ್ಲ. ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ಹೇಳಿದ್ದಾರೆ.
ಈ ಹಿಂದೆ ಹಂಸಲೇಖ ಅವರು ತೆರದ ಹೃದಯ ಶಸ್ತ್ರ ಚಿಕಿತ್ಸೆ ಒಳಗಾಗಿದ್ದರು. ಸದ್ಯ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್ನನಲ್ಲೆ ಒಂದು ದಿನದ ಮಟ್ಟಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ಧಾರೆ ಎನ್ನಲಾಗಿದೆ. ಅದರಂತೆ ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಹಂಸಲೇಖ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ.
ನಟ ಲೋಹಿತಾಶ್ವ ಅಸ್ವಸ್ಥ

ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರಿಗೆ ಹೃದಯಾಘಾತದ ಹಿನ್ನೆಲೆ ನಗರದ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಲೋಹಿತಾಶ್ವ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ನಿನ್ನೆ ರಾತ್ರಿ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಆರೋಗ್ಯ ಸ್ಥಿತಿ ಗಂಭೀರ ಹಿನ್ನೆಲೆ ವೈದ್ಯರು ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಎರಡು ದಿನ ಏನು ಹೇಳಲಾಗದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಲೋಹಿತಾಶ್ವ ಅವರು ಚಿತ್ರ ನಟ, ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು.




