Friday, September 20, 2024

ಪ್ರಾಯೋಗಿಕ ಆವೃತ್ತಿ

ಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಬಂಧನ

‘ಆ ದಿನಗಳು’ ಚಿತ್ರದ ನಾಯಕ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರನ್ನು ಹಿಂದೂ ವಿರೋಧಿ ಬರಹ ಬರೆದು ಆರೋಪದ ಮೇಲೆ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್ ಹಿಂದೂ ಬಗ್ಗೆ ಉರಿಗೌಡ- ನಂಜೇಗೌಡ ವಿಚಾರವಾಗಿ ಅವರು ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಶಿವಕುಮಾರ್ ಎಂಬುವವರು ಚೇತನ್ ವಿರುದ್ಧ ದೂರು ದಾಖಲಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ಚೇತನ್ ಅವರನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ. ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರೀಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂದು ಬರೆದಿದ್ದರು.

‘ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಬರೆದು ಪೋಸ್ಟ್ ಮಾಡಿದ್ದರು.

ಈ ಪೋಸ್ಟ್ ಆಧರಿಸಿ ಶಿವಕುಮಾರ್ ಎಂಬುವರು ದೂರು ನೀಡಿದ್ದಾರೆ. ದೂರಿನಲ್ಲಿ ಚೇತನ್ ಹಿಂದೂ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಹೀಗಾಗಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಿಸಿದ್ದರು. ಹೀಗಾಗಿ ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಕೇಸ್ ದಾಖಲು ಮಾಡಿ ಅರೆಸ್ಟ್ ಮಾಡಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!