Friday, September 20, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ಡಿ.ಕೆ.ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೆ.ಆರ್.ಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಪದಾಧಿಕಾರಿಗಳು ಒತ್ತಾಯ ಮಾಡಿದ್ದಾರೆ.

ಕೆ.ಆರ್.ಪೇಟೆ ಪಟ್ಟಣದ ತಾಲ್ಲೂಕು ಒಕ್ಕಲಿಗರ ಸಂಘದ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ರಾಯಸಮುದ್ರ ಆರ್.ಎಸ್.ಶಿವರಾಮೇಗೌಡ, ಕಾರ್ಯದರ್ಶಿ ಎಂ.ಬಿ.ತಿಮ್ಮೇಗೌಡ, ಮಾತನಾಡಿ, ಒಕ್ಕಲಿಗರ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವು ದಿಗ್ವಿಜಯ ಸಾಧಿಸಿ ಹೆಚ್ಚಿನ ಸ್ಥಾನಗಳನ್ನು ಪಡೆದುಕೊಂಡಿದೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಚ್ಚಿನ ಪರಿಶ್ರಮ ಕಾರಣವಾಗಿದೆ ಎಂದರು.

ಪಕ್ಷವು ಸಂಕಷ್ಟದಲ್ಲಿದ್ದಾಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಕಷ್ಟಪಟ್ಟು ಸಂಘಟನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದವರು ಪಕ್ಷವು ಬಹುಮತ ಪಡೆದರೆ ಮುಖ್ಯಮಂತ್ರಿ ಸ್ಥಾನವನ್ನು ಕೆಪಿಸಿಸಿ ಅಧ್ಯಕ್ಷರಿಗೆ ನೀಡುವುದು ವಾಡಿಕೆಯಾಗಿದೆ ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿ ಹುದ್ದೆಯನ್ನು ಡಿ.ಕೆ.ಶಿವಕುಮಾರ್ ಅವರಿಗೆ ನೀಡುವ ಮೂಲಕ ಡಿ.ಕೆ.ಶಿವಕುಮಾರ್ ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ನೀಡಬೇಕು ಎಂದರು.

ಕಳೆದ 20ವರ್ಷಗಳ ಹಿಂದೆ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದು ಬಿಟ್ಟರೆ ಇಲ್ಲಿಯವರೆವಿಗೂ ಮುಖ್ಯಮಂತ್ರಿ ಹುದ್ದೆ ಒಕ್ಕಲಿಗರಿಗೆ ಸಿಕ್ಕಿಲ್ಲ. ಈಗ ಇರುವ ಅವಕಾಶದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸಿ.ಎಂ. ಪಟ್ಟವನ್ನು ನೀಡಬೇಕು. ಈಗ ಸಂಪ್ರದಾಯದಂತೆ 50:50ಮಾದರಿಯಲ್ಲಿ ಅಧಿಕಾರ ಹಂಚಿಕೆ ಮಾಡಿ ಮೊದಲ ಎರಡೂ ವರ್ಷದ ಅವಧಿಗೆ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಕೆ.ಆರ್.ಪೇಟೆ ಕೃಷ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಗೂಡೇಹೊಸಹಳ್ಳಿ ಜವರಾಯಿಗೌಡ, ಒಕ್ಕಲಿಗರ ಸಂಘದ ಪದಾಧಿಕಾರಿಗಳಾದ ವಸಂತಕುಮಾರ್, ವಕೀಲ ಆರ್.ಕೆ.ರಾಜೇಗೌಡ, ಚನ್ನಿಂಗೇಗೌಡ, ಅಂಚಿ ಸಣ್ಣಸ್ವಾಮೀಗೌಡ, ಜಿ.ಎಂ.ಶ್ರೀಧರ್, ಎಂ.ಆರ್.ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!