Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಾಳೆ ಮಂಡ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.31 ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಮಧ್ಯಾಹ್ನ 12.30 ಗಂಟೆಗೆ ಮಂಡ್ಯನಗರದ ಕಲ್ಲಹಳ್ಳಿಯ ಸುಮ ರವಿ ಕಲ್ಯಾಣ ಮಂಟಪದಲ್ಲಿ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿರುವ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ “ಅಂತರ ಜಿಲ್ಲಾ ಸಮ್ಮೇಳನ” ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮಂಡ್ಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ಮಂಡ್ಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 6ಗೆ ಮಂಡ್ಯ ರಸ್ತೆಯ ಮೂಲಕ ರಾಮನಗರ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರು ತಲುಪುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ 

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅ.31 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಮಧ್ಯಾಹ್ನ 12.30 ಗಂಟೆಗೆ ಕಲ್ಲಹಳ್ಳಿಯ ಸುಮ ರವಿ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ “ಅಂತರ ಜಿಲ್ಲಾ ಸಮ್ಮೇಳನ” ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಡ್ಯ ಜಿಲ್ಲಾ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 6ಗೆ ಮಂಡ್ಯ ರಸ್ತೆಯ ಮೂಲಕ ಮದ್ದೂರು-ಚನ್ನಪಟ್ಟಣ- ರಾಮನಗರ -ಬಿಡದಿ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ