Friday, November 20, 2026

ಪ್ರಾಯೋಗಿಕ ಆವೃತ್ತಿ

ಮುಖ್ಯಮಂತ್ರಿಗಳ ಮಂಡ್ಯ ಪ್ರವಾಸ ಕಾರ್ಯಕ್ರಮ ರದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.6ರಂದು ಮಂಡ್ಯ ಜಿಲ್ಲೆಯಲ್ಲಿ ಕೈಗೊಳ್ಳಲಿದ್ದ ಪ್ರವಾಸ ಕಾರ್ಯಕ್ರಮ ಅನಿವಾರ್ಯ ಕಾರಣಗಳಿಂದಾಗಿ ರದ್ದುಗೊಂಡಿದೆ.

ಮಂಡ್ಯ ತಾಲೂಕಿನ ದುದ್ದ ಹೋಬಳಿಯ ಬೇವುಕಲ್ಲು ಕೊಪ್ಪಲು ಗ್ರಾಮದ 16 ಕೂಟಗಳ ಮಂತ್ರಿ ಶ್ರೀ ಹುಚ್ಚರಾಯ ಬೀರೇಶ್ವರ ಸ್ವಾಮಿ ಮತ್ತು ಶ್ರೀ ಗುತ್ತಿ ಲಕ್ಕಮ್ಮ ದೇವಸ್ಥಾನ ಗಳ ವಿಮಾನ ಗೋಪುರದ ಕಳಸ ಪ್ರತಿಷ್ಠಾಪನೆಯ ಅಂಗವಾಗಿ ನಡೆಯಲಿದ್ದ 30 ಕೂಟಗಳ ಪೂಜಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಬೇಕಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದಾಗಿ ಈ ಕಾರ್ಯಕ್ರಮ ರದ್ದುಗೊಂಡಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಸುತ್ತೋಲೆ ಹೊರಡಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ