Friday, October 18, 2024

ಪ್ರಾಯೋಗಿಕ ಆವೃತ್ತಿ

ಪತಿ ನಿವೃತ್ತಿ ಬೆನ್ನಲ್ಲೇ ಪತ್ನಿಗೆ ಉನ್ನತ ಹುದ್ದೆ| ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್

ಪ್ರಸ್ತುತ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವ ಹಿರಿಯ ಐಎಎಸ್ ಅಧಿಕಾರಿ ರಜನೀಶ್‌ ಗೋಯೆಲ್‌ ಅವರು ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿಯಾಗಿರುವ ಹಿರಿಯ ಐಎಎಸ್ ಅಧಿಕಾರಿಯೂ ಆದ ಶಾಲಿನಿ ರಜನೀಶ್‌ ಅವರನ್ನು ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲು ತೀರ್ಮಾನಿಸಿದ್ದು, ಇಂದು ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್​ ಅವರು, ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್​ ಅವರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!