Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಾವಿಯಲ್ಲಿ ದೊರೆತ ಮಗುವಿಗೆ ಮಿಮ್ಸ್ ನಲ್ಲಿ ಚಿಕಿತ್ಸೆ

ಪಾಂಡವಪುರ ಚಂದ್ರೆ ಗ್ರಾಮದಲ್ಲಿ 35 ಅಡಿ ಆಳದ ನೀರಿಲ್ಲದ ತೆರದ ಬಾವಿಗೆ ಎಸೆದಿದ್ದು, ನವಜಾತ ಶಿಶುವನ್ನು ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದೆ.

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ಇಂದು ಮಿಮ್ಸ್ ನ ಐ.ಸಿ.ಯು.ನಲ್ಲಿ ಮಗುವಿನ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಮಗುವಿಗೆ ಉತ್ತಮ ಚಿಕಿತ್ಸೆ ನೀಡುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಜಿಲ್ಲಾಡಳಿತದ ವತಿಯಿಂದ ಮಗುವಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ: ಧನಂಜಯ್ ಅವರು ಮಗು ಅವಧಿಗೆ ಮುನ್ನವೇ ಜನಿಸಿರುವ ಹಿನ್ನೆಲೆಯಲ್ಲಿ ಮಗುವಿನ ತೂಕ 1.50 ಕೆ.ಜಿ ಮಾತ್ರ ಇದ್ದು, ಮಗುವಿನ ತೂಕ ಹೆಚ್ಚಳವಾಗುವವರೆಗೆ ಒಂದು ವಾರ ಐ.ಸಿ.ಯು ನಲ್ಲಿ ಚಿಕಿತ್ಸೆ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!