Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಕ್ಕಳ ಕಾಯ್ದೆ ಸಂರಕ್ಷಿಸುವುದು ಎಲ್ಲರ ಕರ್ತವ್ಯ: ನ್ಯಾ.ಬಿ.ಜಿ‌.ರಮಾ

ಮಕ್ಕಳ ಬಗೆಗಿನ ಕಾಯ್ದೆಗಳ ಸಂರಕ್ಷಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಜಿ.ರಮಾ ತಿಳಿಸಿದರು.

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಂಡ್ಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಪೊಲೀಸ್ ಇಲಾಖೆ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಬಾಲ ನ್ಯಾಯ ಕಾಯ್ದೆ- 2015 ಪೋಕ್ಸೋ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೊಸ ಹೊಸ ಕಾಯ್ದೆ, ಕಾನೂನುಗಳು ಬಂದಾಗ ಅವುಗಳ ಸರಿಯಾದ ರೀತಿಯ ನಿರ್ವಹಣೆಗೆ ಇಂತಹ ತರಬೇತಿ ಕಾರ್ಯಗಾರಗಳು ಅಗತ್ಯ ಎಂದು ತಿಳಿಸಿದರು. ನಾನೊಬ್ಬ ನ್ಯಾಯಧೀಶರಾಗಿ, ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಪ್ರಾಮಾಣಿಕತೆ ಮತ್ತು ಸಾಮಾಜಿಕ ಕಳಕಳಿಯನ್ನು ನಿರೀಕ್ಷಿಸುವುದಾಗಿ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಾಣಿ ಕೆ.ಶೆಟ್ಟಿ, ಎರಡನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗ ಹೇಮಶ್ರೀ ಡಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ ಎಸ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ. ಕೆ. ಕುಮಾರಸ್ವಾಮಿ, ರಕ್ಷಣಾಧಿಕಾರಿಗಳಾದ ಮಹದೇವ್ ಕೆ.ಎಂ ಹಾಗೂ ರಾಜೇಂದ್ರ, ಮಕ್ಕಳ ಸಹಾಯವಾಣಿಯ ಸಂಯೋಜಕರಾದ ಶೋಭಾವತಿ,ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಶಂಕರ್, ವಿನುತಾ, ವಿದ್ಯಾ, ರಶ್ಮಿ, ಲಕ್ಷ್ಮೀಶ, ವಿಮಲ ಹಾಗೂ ಸಿಬ್ಬಂದಿಗಳು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!