Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಕ್ಕಳ ಶಿಕ್ಷಣದ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು : ಮಧು ಜಿ.ಮಾದೇಗೌಡ

ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಉತ್ತಮ ಶಿಕ್ಷಣವನ್ನು ನೀಡಬೇಕು. ಈ ಹಂತದಲ್ಲಿ ಉತ್ತಮವಾಗಿ ವಿದ್ಯಾಭ್ಯಾಸ ಮಾಡಿದರೆ ಪಿಯುಸಿ ಕಷ್ಟಕರವಾಗಿರುವುದಿಲ್ಲ. ಮಕ್ಕಳ ಶಿಕ್ಷಣದ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ ಅವರು ತಿಳಿಸಿದರು.

ಮಂಡ್ಯದ ಹನಿಯಂಬಾಡಿ ರಸ್ತೆಯಲ್ಲಿರುವ ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ- 2022ರ ಕಲಾಸಿರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯೋಲ್ಲಾಸ ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಿಗೆ ಅಭಿನಂದಿಸಿ ಅವರು ಮಾತನಾಡಿದರು.

ಮಂಡ್ಯ ಜಿಲ್ಲೆಯಲ್ಲಿ ಉತ್ತಮ ಶಿಕ್ಷಣ ಸಂಸ್ಥೆಗೆ ತಮ್ಮ ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಿರುವುದಕ್ಕೆ ಪೋಷಕರಿಗೆ ಅಭಿನಂದನೆ ತಿಳಿಸುತ್ತೇನೆ. ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ಚಟುವಟಿಕೆ ಹಾಗೂ ಇಲ್ಲಿನ ಸ್ವಚ್ಛತೆಯ ಕುರಿತು ವೀಕ್ಷಣೆ ಮಾಡಿದೆ. ನಿಜಕ್ಕೂ ಬಹಳ ಸಂತಸ ಉಂಟು ಮಾಡಿದೆ ಎಂದರು.

ಇದೇ ವೇಳೆ ಪಿ.ಇ.ಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ ಅವರು ಮಾತನಾಡಿ, ಒಂದು ಸಂಸ್ಥೆಯನ್ನು ಕಟ್ಟಿ ಬೆಳೆಸುವುದು ಬಹಳ ಕಷ್ಟ ಹಾಗೂ ಗುಣಮಟ್ಟ ಶಿಕ್ಷಣವನ್ನು ನೀಡುವುದು ಬಹಳ ಮುಖ್ಯ. ಸದ್ವಿದ್ಯಾ ಶಿಕ್ಷಣ ಸಂಸ್ಥೆಯು ಇನ್ನಷ್ಟು ಸುಧೀರ್ಘವಾಗಿ ಬೆಳಗಲಿ, ವಿದ್ಯಾರ್ಥಿಗಳಿಗೆ ಹೆಚ್ಚು ಹೆಚ್ಚು ಶಿಕ್ಷಣವನ್ನು ನೀಡಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ.ಕೆ.ಹರೀಶ್ ಕುಮಾರ್, ಕಾರ್ಯದರ್ಶಿ ರತ್ನಶ್ರೀ, ಸಂಸ್ಥೆಯ ಮುಖ್ಯ ಶಿಕ್ಷಕಿ ಬಿ.ಎಸ್.ಗೀತಾ, ಬಿ.ಆರ್.ಶುಭ, ಟ್ರಸ್ಟಿಗಳಾದ ಫಣಿಮಾಲ, ಸುನೀಲ್, ಕೃಷ್ಣಪ್ಪ, ಸೇರಿಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!