Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮ

ಮಂಡ್ಯ ನಗರದ ಕಾರ್ಮೆಲ್ ಕಾನ್ವೆಂಟ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಡ್ಸ್ ಸಂಸ್ಥೆ ವತಿಯಿಂದ ಮಕ್ಕಳ ಹಕ್ಕುಗಳ ಸಂಸತ್ 2023 ಕಾರ್ಯಕ್ರಮ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ವಾಣಿ ಕೆ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಬಾಲ್ಯ ಅಮೂಲ್ಯವಾದದ್ದು ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಿ ಕಾರ್ಯ ನಿರ್ವಹಿಸಬೇಕು. ರಾಷ್ಟ್ರದ ಉತ್ತಮ ಪ್ರಜೆಯ ನಿರ್ಮಾಣ ಮಾಡುವಲ್ಲಿ ಮಕ್ಕಳನ್ನು ಸರಿದಾರಿಯಲ್ಲೇ ಬೆಳೆಸುವುದು ಅತ್ಯಂತ ಮುಖ್ಯವಾದ ಕೆಲಸವಾಗಿದ್ದು ಈ ವಿಷಯದಲ್ಲಿ ಪೋಷಕರು ಹಾಗೂ ಶಿಕ್ಷಕರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಸಲಹೆ ನೀಡಿದರು.

ಮಕ್ಕಳ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿದೆ ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಳ್ಳ ಸಾಗಣಿಕೆ ಅಂತಹ ದುಷ್ಕೃತ್ಯಗಳು ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯ ವಿವಾಹ ಆದಂತಹ ದೌರ್ಜನ್ಯಗಳು ಮೆಚ್ಚಿದ್ದು ಈ ಬದಿಗೆ ಹೆಚ್ಚಿನ ಕಾಳಜಿಯನ್ನು ವಹಿಸಿ ಇವುಗಳನ್ನು ತಡೆಗಟ್ಟಲು ಸಮುದಾಯ ಹೆಚ್ಚು ಜಾಗೃತವಾಗಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ವೆಂಕಟೇಶ್ ಮಕ್ಕಳ ಹಕ್ಕುಗಳು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಮಕ್ಕಳು ರಾಷ್ಟ್ರದ ದೊಡ್ಡ ಆಸ್ತಿ ಅವರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಮಕ್ಕಳ ಹಕ್ಕುಗಳ ಬಗೆಗೆ ಪ್ರತಿಯೊಬ್ಬರು ಜಾಗೃತರಾಗಬೇಕು. ಮಕ್ಕಳ ಮೇಲಿನ ದೌರ್ಜನಗಳನ್ನು ತಪ್ಪಿಸಿ ಅವರ ಮೇಲಿನ ಶೋಷಣೆಗಳನ್ನು ತಪ್ಪಿಸಲು ಇಡೀ ಸಮಾಜದ ಜಾಗೃತರಾಗಬೇಕು ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ ಮಾತನಾಡಿ, ಮಕ್ಕಳು ದೇವರಿಗೆ ಸಮಾನ ಕಡ್ಡಾಯ ಶಿಕ್ಷಣ ಹಕ್ಕನ್ನು ಜಾರಿಗೊಳಿಸಿದ್ದು ಯಾವುದೇ ಮಕ್ಕಳು ಶಾಲೆಯ ಎಂದ ವರವಳಿಯದಂತೆ ಎಚ್ಚರ ವಹಿಸಲಾಗುತ್ತಿದೆ. 6 ರಿಂದ 18 ರ ವರೆಗಿನ ಎಲ್ಲಾ ಮಕ್ಕಳಿಗೂ ಉಚಿತ ಕಡ್ಡಾಯ ಶಿಕ್ಷಣವನ್ನು ನೀಡುವುದನ್ನು ನಮ್ಮ ಸಂವಿಧಾನವೇ ಜಾರಿಗೊಳಿಸಿದೆ. ಮಕ್ಕಳ ರಕ್ಷಣೆಯ ಬಗೆಗೆ ಪ್ರತಿಯೊಬ್ಬರು ಕಾಳಜಿ ವಹಿಸುವುದರ ಜೊತೆಗೆ ಎಲ್ಲಾ ಮಕ್ಕಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳಬೇಕಾದದ್ದು ನಮ್ಮ ಜವಾಬ್ದಾರಿ ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜಮಣಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಧರಣಿ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು ಹಾಗೂ ಕೆ. ಸೌಭಾಗ್ಯ ಕಾರ್ಮೆಲ್ ಕಾನ್ವೆಂಟ್ ಮುಖ್ಯ ಶಿಕ್ಷಕಿ ಸಿಸ್ಟರ್ ಅಲ್ವಿನ್ ರೋಸ್ ಪಾಲ್ಗೊಂಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!