Friday, November 20, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮ

ಮಳವಳ್ಳಿ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಸಿದ್ಧಾರ್ಥ ಸಂಯುಕ್ತ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಸಂಸ್ಕೃತ ಪಾಠಶಾಲೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮ ಮಳವಳ್ಳಿ ಪಟ್ಟಣದ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಹಲಗೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ವಿಧ್ಯಾಭ್ಯಾಸದ ಕಡೆ ಹೆಚ್ಚು ಗಮನಹರಿಸಿ, ಕೆಟ್ಟ ಚಟಗಳಿಂದ ದೂರವಿರಬೇಕು. ಈ ವಯಸ್ಸಿನಲ್ಲಿ ಯಾವುದೇ ಆಕರ್ಷಣೆಗೆ ಒಳಗಾಗದೆ ಉತ್ತಮ ವಿದ್ಯಾಭ್ಯಾಸ ಮಾಡಿ ಉತ್ತಮ ಜೀವನವನ್ನು ನಡೆಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಕೆಂಪದಾಸೇಗೌಡ, ಮಂಜುಳಾ, ಮುಖ್ಯಶಿಕ್ಷಕ ರಾಜು, ಮಹದೇವ, ರಾಜೇಂದ್ರ ಸೇರಿದಂತೆ ಹಲವರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ