Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅಂಗನವಾಡಿಯತ್ತ ತೆರಳಿದ ಚಿಣ್ಣರು- ಸಿಹಿ ತಿನ್ನಿಸಿ ಸ್ವಾಗತಿಸಿದ ಸಿಇಓ

ರಾಜ್ಯ ಸರ್ಕಾರದ ಆದೇಶದಂತೆ ಮಂಡ್ಯ ಜಿಲ್ಲಾಡಳಿತ. ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳು ಪುನರಾರಂಭವಾಗಿದ್ದು, ಇಂದಿನಿಂದ ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಗಳತ್ತ ತೆರಳಿದರು. ಇದೇ ಸಂದರ್ಭದಲ್ಲಿ ಮಂಡ್ಯ ತಾಲ್ಲೋಕಿನ ಕೋಣನಹಳ್ಳಿ ಗ್ರಾಮದ ಎಂ,ಜಿ. ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಅಧಿಕಾರಿಗಳು ಮಕ್ಕಳಿಗೆ ಸಿಹಿಯನ್ನು ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು.

ಮಂಡ್ಯ ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಅಸೀಫ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ರಾಜಮೂರ್ತಿ ಅವರ ನೇತೃತ್ವದಲ್ಲಿ ಕೇಕ್ ಕತ್ತರಿಗೆ ಮಕ್ಕಳಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಕಲಿಕಾ ಕೇಂದ್ರ ಹಾಗೂ ತರಗತಿ ಕೊಠಡಿಗೆ ಚಾಲನೆ ನೀಡಿ, ಮಕ್ಕಳಿಗೆ ಗುಣಮಟ್ಟ ಶಿಕ್ಷಣವನ್ನು ನೀಡಲು ಅಂಗನವಾಡಿ ಶಿಕ್ಷಕಿಯರಿಗೆ ಸೂಕ್ತ ತರಬೇತಿಯನ್ನು ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಿಇಓ ಚಾಲನೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಅಸೀಫ್ ಮಾತನಾಡಿ, ಬೇಸಿಗೆ ರಜಾ ನಂತರ ಮಕ್ಕಳು ಮತ್ತೆ ಮರಳಿ ಅಂಗನವಾಡಿ ಕೇಂದ್ರಗಳತ್ತ ಬಂದಿದ್ದಾರೆ. ಜಿಲ್ಲೆಯಲ್ಲಿರುವ 588 ಅಂಗನವಾಡಿ ಕೇಂದ್ರಗಳನ್ನು ಸ್ವಚ್ಛಗೊಳಿಸಿ ಸಿದ್ದಗೊಳಿಸಲಾಗಿದೆ. ಮಕ್ಕಳಿಗೆ ಕುದಿಸಿ ಆರಿಸಿದ ನೀರನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಿ ಪೋಷ್ಟಿಕಾಂಶ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಆರ್.ಕುಮಾರಸ್ವಾಮಿ ನೇತೃತ್ವದಲ್ಲಿ ಮಂಡ್ಯ ತಾಲ್ಲೋಕಿನ ಹೊಸ ಬೂದನೂರು. ಮಂಡ್ಯ ನಗರದಲ್ಲಿರುವ ಶಂಕರಮಠ . ಎಸ್.ಡಿ.ಜಯರಾಂ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಹೂ. ಸಿಹಿ ವಿತರಿಸಿ ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಂಡರು.

ನಂತರ ಮಾತನಾಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಆರ್.ಕುಮಾರಸ್ವಾಮಿ. ಅಂಗನವಾಡಿ ಇಂದಿನಿAದ ಪ್ರಾರಂಭವಾಗಿದ್ದು ಮಕ್ಕಳು ಸಹ ಖುಷಿಯಿಂದ ಶಾಲೆಗೆ ಆಗಮಿಸಿದ್ದಾರೆ. ಮಳೆಗಾಲ ಪ್ರಾರಂಭವಾಗುತ್ತಿರುವುದರಿAದ ಮಕ್ಕಳಿಗೆ ಕುದಿಸಿ ಆರಿಸಿದ ನೀರು ಹಾಗೂ ಗುಣಮಟ್ಟದ ಆಹಾರವನ್ನು ನೀಡಲು ಸೂಚನೆಯನ್ನು ನೀಡಲಾಗಿದೆ ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!