ಮಳವಳ್ಳಿ ಪಟ್ಟಣದ ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಟಿ ಸಿ ಚೌಡಯ್ಯ ಅವಿರೋಧ ಆಯ್ಕೆಯಾದರು.
ಇಂದು ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಟಿ.ಸಿ.ಚೌಡಯ್ಯ ನಾಮಪತ್ರ ಸಲ್ಲಿಕೆಯಾಗಿದ್ದು, ಬೇರೆ ಯಾವುದೇ ನಾಮ ಪತ್ರ ಸಲ್ಲಿಕೆ ಆಗದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಟಿ.ಸಿ ಚೌಡಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ರಾಮಕೃಷ್ಣ ತಿಳಿಸಿದರು.
ಟಿ.ಸಿ.ಚೌಡಯ್ಯ ಮಾತನಾಡಿ, ಸಂಘದ ಏಳಿಗೆಗಾಗಿ ಆಡಳಿತ ಮಂಡಳಿಯ ಸರ್ವ ಸದಸ್ಯರ ಸಹಕಾರ ಅಗತ್ಯ. ಸಂಘವನ್ನು ಮಾದರಿ ಸಂಘವಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಮನವಿ ಮಾಡಿದರು. ನನ್ನನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲು ಕಾರಣಕರ್ತರಾದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹಾಗೂ ನಿರ್ದೇಶಕರಿಗೆ ಅಭಿನಂದಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಉಪಾಧ್ಯಕ್ಷ ಕುಮಾರ್, ಮಾಜಿ ಅಧ್ಯಕ್ಷ ಬಸವರಾಜು, ಕುಳ್ಳಚನ್ನೇಂಕೇಗೌಡ, ದ್ಯಾಪೇಗೌಡ, ದೇವರಾಜು, ಬಸವೇಶ್, ಲಿಂಗರಾಜು ಮೊಳೆದೊಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ ರಾಜು ಸೇರಿದಂತೆ ಹಲವರು ಇದ್ದರು.




