Wednesday, May 1, 2024

ಪ್ರಾಯೋಗಿಕ ಆವೃತ್ತಿ

ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ? : ಕಾಂಗ್ರೆಸ್ ಪ್ರಶ್ನೆ

ಲೋಕಸಭೆಯಲ್ಲಿ ಸಂಸದರು ಚರ್ಚೆ ನಡೆಸುತ್ತಿರುವಾಗಲೇ ವೀಕ್ಷಕರ ಗ್ಯಾಲರಿ ಮೂಲಕ ಇಬ್ಬರು ಯುವಕರು ಸದನದ ಒಳಗೆ ಪ್ರವೇಶಿಸಿರುವ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ‘300 ಕೆಜಿ RDX ಯಾವುದೇ ಅಡೆತಡೆ ಇಲ್ಲದೆ ಕಾಶ್ಮೀರದೊಳಗೆ ಬರುತ್ತದೆ. ಸ್ಪೋಟಕ ವಸ್ತು ಯಾವುದೇ ಅಡೆತಡೆ ಇಲ್ಲದೆ ಸಂಸತ್ತಿನೊಳಗೆ ಬರುತ್ತದೆ. ಸಂಸತ್ತನ್ನೇ ಕಾಯಲಾಗದ ಚೌಕಿದಾರ್ ನಿಗೆ ದೇಶ ಕಾಯಲು ಸಾಧ್ಯವೇ? ಈ ಮಟ್ಟಿಗೆ ಭದ್ರತಾ ಲೋಪವಾಗಿದ್ದು ಹೇಗೆ? ಯಾಕೆ? ಈ ಸಂಸತ್ ದಾಳಿಯ ಹಿಂದೆ ಪ್ರತಾಪ್ ಸಿಂಹರದ್ದು ಪ್ರಮುಖ ಪಾತ್ರವಿದೆ’ ಎಂದು ಆರೋಪಿಸಿದೆ.

“>

 

‘ಸಂಸತ್ತಿಗೆ ನುಗ್ಗಿದ ಘಾತುಕರು ಪಾಸ್ ಪಡೆದಿದ್ದು ಪ್ರತಾಪ್ ಸಿಂಹರಿಂದ. ಈ ದಾಳಿಕೊರರು ಪ್ರತಾಪ್ ಸಿಂಹ ಅವರ ಆಪ್ತ ವಲಯದವರೇ? ಪ್ರತಾಪ್ ಸಿಂಹರಿಂದಲೂ ಈ ದಾಳಿಯ ಷಡ್ಯಂತ್ರ ನಡೆದಿತ್ತೇ? ಈ ಎಲ್ಲಾ ಸಂಗತಿಗಳ ತನಿಖೆಗೆ ನಡೆಸಲು ಇದುವರೆಗೂ ಪ್ರತಾಪ್ ಸಿಂಹರನ್ನು ವಶಕ್ಕೆ ಪಡೆದಿಲ್ಲವೇಕೆ? ದೇಶದಲ್ಲಿ ಭದ್ರತಾ ಲೋಪವಷ್ಟೇ ಅಲ್ಲ, ತನಿಖೆಯ ಲೋಪವೂ ನಡೆಯುತ್ತಿರುವುದೇಕೆ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“>

‘ಹಿಂದೆ 2001ರಲ್ಲಿ ಇದೇ ದಿನ ಸಂಸತ್ ಭವನದ ಮೇಲೆ ಉಗ್ರರ ದಾಳಿಯಾಗಿತ್ತು, ಆಗಲೂ ಬಿಜೆಪಿ ಆಡಳಿತವಿತ್ತು. ಈಗ ಸಂಸತ್ ಭವನದ ಒಳಗೆಯೇ ಭದ್ರತಾ ಲೋಪವಾಗಿದೆ. ಪುಲ್ವಾಮದಲ್ಲಿ ಯೋಧರನ್ನು ರಕ್ಷಿಸಲಾಗಲಿಲ್ಲ, ಸಂಸತ್ತಿನಲ್ಲಿ ಸಂಸದರನ್ನೂ ರಕ್ಷಿಸಲು ವಿಫಲವಾಗಿದೆ. ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಪೀಕರ್ ಓಂ ಬಿರ್ಲಾ  ಅವರು ಕೂಡಲೇ ಪ್ರಾತಾಪ್ ಸಿಂಹ ಅವರನ್ನು ಈ ಕೂಡಲೇ ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದೆ.

‘2001ರ ಸಂಸತ್ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಇಂದು ಲೋಕಸಭೆಯ ಒಳಗೆ ಭದ್ರತಾ ಉಲ್ಲಂಘನೆಯು ತೀವ್ರ ಕಳವಳಕಾರಿಯಾಗಿದೆ. ನಮ್ಮ ಸಂಸತ್ತು ದೇಶದ ಅತ್ಯಂತ ಉತ್ತಮವಾಗಿ ಸಂರಕ್ಷಿತ ಸ್ಥಳಗಳಲ್ಲಿ ಒಂದಾಗಿದೆ ಮತ್ತು ಈ ಉಲ್ಲಂಘನೆಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಈ ಗಂಭೀರ ಭದ್ರತಾ ಲೋಪದ ತಳಹದಿಯನ್ನು ಪಡೆಯಲು ಸಂಪೂರ್ಣ ತನಿಖೆಯನ್ನು ಕೈಗೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆ ಮತ್ತೆ ಮರುಕಳಿಸುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!