Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕ್ರಿಸ್‌ಮಸ್ : ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಕ್ರಿಸ್‌ಮಸ್ ಅಂಗವಾಗಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ನಾಯಕ, ಡಾ. ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ದಡದಪುರ ಬಿ.ಎಸ್‌.ಶಿವಣ್ಣ ಲ್ಯಾಪ್‌ಟಾಪ್‌ ವಿತರಿಸಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ರಾಜ್ಯದ ವಿವಿಧ ಜಿಲ್ಲೆಗಳ ಆರ್ಥಿಕವಾಗಿ ಹಿಂದುಳಿದ 45 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಅವರ ವಿದ್ಯಾಭ್ಯಾಸಕ್ಕೆ ಶುಭ ಕೋರಿದರು.ಮೆಡಿಕಲ್, ಇಂಜಿನಿಯರಿಂಗ್ ಹಾಗೂ ವೃತ್ತಿಪರ ಕೋರ್ಸುಗಳ ಮೆರಿಟ್ ವಿದ್ಯಾರ್ಥಿಗಳು ಲ್ಯಾಪ್‌ಟಾಪ್ ಪಡೆದು ಶಿವಣ್ಣ ಅವರ ಸೇವಾ ಕಾರ್ಯವನ್ನು ಶ್ಲಾಘಿಸಿ, ಸಂತಸ ವ್ಯಕ್ತಪಡಿಸಿದರು.

ಈ ಬಗ್ಗೆ ನುಡಿ ಕರ್ನಾಟಕ. ಕಾಮ್ ಜೊತೆ ಮಾತನಾಡಿದ ಬಿ.ಎಸ್.ಶಿವಣ್ಣ ಅವರು,ಕೊರೋನಾ ಬಂದ ನಂತರ ಬಡವರು,ಹಿಂದುಳಿದವರ ಮನೆಗಳ ಆರ್ಥಿಕ ಪರಿಸ್ಥಿತಿ ತುಂಬಾ ಶೋಚನೀಯವಾಗಿತ್ತು.ಇದನ್ನು ಮನಗಂಡು ನಾನು ಬಡ ಪ್ರತಿಭಾವಂತ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಉದ್ದೇಶದಿಂದ ನಮ್ಮ ರಾಮ ಮನೋಹರ ಲೋಹಿಯಾ ವೇದಿಕೆಯ ಮೂಲಕ ಲ್ಯಾಪ್‌ಟಾಪ್ ವಿತರಿಸುವ ಸಂಕಲ್ಪ ಮಾಡಿದೆ‌.ಅಂದಿನಿಂದ ಪ್ರತಿ ವರ್ಷ ಬಡವರು,ಹಿಂದುಳಿದ ವರ್ಗಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಿಸುತ್ತಾ ಬಂದಿದ್ದೇನೆ.ಇದುವರೆಗೂ ವೇದಿಕೆಯಿಂದ 622 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದ್ದು,ಈ ಸೇವಾ ಕಾರ್ಯ ಮುಂದುವರಿಯಲಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ಉದ್ದೇಶದಿಂದ ಉಚಿತವಾಗಿ ಲ್ಯಾಪ್‌ಟಾಪ್ ನೀಡುವ ಬಗ್ಗೆ ಗಮನ ಹರಿಸಬೇಕು.ಅಲ್ಲಿಯವರೆಗೂ ನಮ್ಮ ವೇದಿಕೆ ಲ್ಯಾಪ್‌ಟಾಪ್ ನೀಡುವ ಕೆಲಸ ಮುಂದುವರಿಸಲಿದೆ ಎಂದರು.

ಇದಲ್ಲದೆ ಮೆರಿಟ್ ಪಡೆದಿರುವ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ವೇದಿಕೆ ವತಿಯಿಂದ ಆರ್ಥಿಕ ಸಹಾಯವನ್ನು ಮಾಡಲಾಗಿದೆ.ವಿದ್ಯಾರ್ಥಿಗಳು ಲ್ಯಾಪ್‌ಟಾಪ್ ಸದುಪಯೋಗ ಪಡೆದು ಉತ್ತಮ ಅಂಕ ಗಳಿಸಿ ಉನ್ನತ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಬೇಕೆಂಬುದು ನನ್ನ ಉದ್ದೇಶ ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ