Saturday, November 21, 2026

ಪ್ರಾಯೋಗಿಕ ಆವೃತ್ತಿ

ಅ.11ಕ್ಕೆ ಸಿಐಟಿಯು ಮಂಡ್ಯ ಜಿಲ್ಲಾ ಸಮ್ಮೇಳನ : ಸಿ.ಕುಮಾರಿ

ಮಂಡ್ಯ ಜಿಲ್ಲಾ ಸಿಐಟಿಯು ವತಿಯಿಂದ ‘ದುಡಿಯುವ ಜನರ ಹಕ್ಕುಗಳ ರಕ್ಷಣೆಗಾಗಿ’ ಧೇಯ ವಾಕ್ಯದೊಂದಿಗೆ 9ನೇ ಮಂಡ್ಯ ಜಿಲ್ಲಾ ಸಮ್ಮೇಳನವನ್ನು ಅ.11ರ ಬೆಳಿಗ್ಗೆ 10.30 ಗಂಟೆಗೆ ಪಾಂಡವಪುರ ಪಟ್ಟಣದ ಶಿಕ್ಷಕರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪಟ್ಟಣ ಪೈಲೆಟ್ ವೃತ್ತಿದಿಂದ ಶಿಕ್ಷಕರ ಭವನದವರೆಗೆ ಮೆರವಣಿಗೆ ನಡೆಸಿ, ಬಹಿರಂಗ ಸಭೆ ನಡೆಸಲಾಗುವುದು ಎಂದರು.

ರಾಜ್ಯ ರೈತಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಅಧ್ಯಕ್ಷತೆಯ ಸಮಾವೇಶವನ್ನು ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಾಜಿ ರಾವ್ ಉದ್ಘಾಟಿಸಿ ಮಾತನಾಡುವರು. ಸಿಐಟಿಯು ಜಿಲ್ಲಾಧ್ಯಕ್ಷ ಎಂ.ಎಂ.ಶಿವಕುಮಾರ್ ಸ್ವಾಗತ ಕೋರಲಿದ್ದು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ಪ್ರಾಸ್ತಾವಿಕ ನುಡಿಗಳನ್ನಾಡುವರು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಸಿಐಟಿಯು ರಾಜ್ಯ ಉಪಾಧ್ಯಕ್ಷೆ ಮಾಲಿನಿ ಮೇಸ್ತಾ, ರಾಜ್ಯ ಕಾರ್ಯದರ್ಶಿ ಜಿ.ರಾಮಕೃಷ್ಣ, ರೈತಸಂಘದ ಹಿರಿಯ ಮುಖಂಡ ಕೆ.ಟಿ.ಗೋವಿಂದೇಗೌಡ, ಕೆಪಿಆರ್‌ಎಸ್ ಮುಖಂಡ ಟಿ.ಎಲ್.ಕೃಷ್ಣೇಗೌಡ, ಸಾಹಿತಿಗಳಾದ ಡಾ.ಬೋರೇಗೌಡ ಚಿಕ್ಕಮರಳಿ, ಹರವು ದೇವೇಗೌಡ, ಡಿಎಸ್‌ಎಸ್ ಮುಖಂಡ ಜಿ.ಪ್ರಕಾಶ್ ಹಾರೋಹಳ್ಳಿ, ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಮಹದೇವಮ್ಮ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಪ್ರಮೀಳಕುಮಾರಿ ಭಾಗವಹಿಸಲಿದ್ದಾರೆ ಎಂದು ವಿವರಿಸದಿರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಎಂ.ಎಂ.ಶಿವಕುಮಾರ್, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ರೈತ ಸಂಘದ ಪಾಂಡವಪುರ ತಾಲೂಕು ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಸಿದ್ದತಾ ಸಮಿತಿಯ ಉಪಾಧ್ಯಕ್ಷ ಕೃಷ್ಣೇಗೌಡ, ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಮಹದೇವಮ್ಮ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಪ್ರಮೀಳಕುಮಾರಿ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ