Friday, November 20, 2026

ಪ್ರಾಯೋಗಿಕ ಆವೃತ್ತಿ

ಸಾರ್ವತ್ರಿಕ ಮುಷ್ಕರಕ್ಕೆ ಸಿಐಟಿಯು ಕಾರ್ಯಕರ್ತರ ಬೆಂಬಲ – ಪ್ರತಿಭಟನೆ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರ್ವತ್ರಿಕ ಮುಷ್ಕರದ ಹಿನ್ನಲೆಯಲ್ಲಿ ಪಟ್ಟಣದ ಅನಂತ್‌ರಾಂ ವೃತ್ತದಲ್ಲಿ ಸಿಐಟಿಯೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿಯಿಂದ ಸಿಐಟಿಯೂ, ಪ್ರಾಂತ ರೈತ ಸಂಘದ ಮುಖಂಡರು, ಅಂಗನವಾಡಿ, ಬಿಸಿಯೂಟ ನೌಕರರು, ಕಟ್ಟಡ ಕಾರ್ಮಿಕರು, ಎಲ್‌ಐಸಿ ಸೇರಿದಂತೆ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಪಟ್ಟಣದ ಅನಂತ್‌ರಾಂ ವೃತ್ತದ ಆವರಣದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ ಮಾತನಾಡಿ, ಹೋರಾಟದ ತ್ಯಾಗ ಬಲಿದಾನದ ಸಂಕೇತವಾಗಿ ಜಾರಿಯಾಗಿರುವ ಕಾರ್ಮಿಕ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದು ಕಾರ್ಮಿಕರನ್ನು ಕಾರ್ಪೊರೇಟ್ ಕಂಪನಿಗಳ ಗುಲಾಮರನ್ನಾಗಿ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಕಾರ್ಮಿಕರು ೮ ಗಂಟೆಗಳ ಕಾಲದ ಕೆಲಸದ ಅವಧಿಯನ್ನು ೧೦ ಗಂಟೆಗೆ ಏರಿಕೆ ಮಾಡಿರುವುದು, ಕಾರ್ಮಿಕ ವಿರೋಧಿ ನೀತಿಯಾಗಿದೆ, ಹಲವು ತಿದ್ದುಪಡಿಗಳ ಮೂಲಕ ಕೇಂದ್ರ ಸರ್ಕಾರ ಕಾರ್ಮಿಕರ ಧಮನಕಾರಿ ಕಾನೂನು ಜಾರಿಗೆ ಮುಂದಾಗಿರುವುದು ಸರಿಯಾದ ಕ್ರಮವಾಲ್ಲ ರಾಜ್ಯ ಸರ್ಕಾರ ದೇವನಹಳ್ಳಿ ಸುತ್ತಮುತ್ತ ೧೭೦೦ ಎಕರೆ ರೈತರ ಕೃಷಿ ಜಮೀನನ್ನು ಕಿತ್ತು ಕಾರ್ಪೊರೇಟ್ ಕಂಪನಿಗಳಿಗೆ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆAದು ಹೇಳಿದರು.

ಹೈಡ್ರಾಮ: ಪ್ರತಿಭಟನೆಗೆ ತೆಗೆದುಕೊಂಡಿದ್ದ ಕಾಲಮಿತಿ ಮುಗಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ರಸ್ತೆಯಿಂದ ತೆರವುಗೊಳಿಸುವಂತೆ ಪೊಲೀಸರು ಸೂಚನೆ ನೀಡಿದರು. ಪೊಲೀಸರ ಮಾತಿಗೆ ಬಗ್ಗದ ಪ್ರತಿಭಟನಾಕಾರರು ಪ್ರತಿಭಟನೆಗೆ ಮುಂದುವರೆಸುತ್ತಿದ್ದಾಗ ಪೊಲಿಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ಹಾಗೂ ಮಾತಿನ ಚಕಾಮಕಿ ನಡೆಯಿತು. ನಂತರ ಎಲ್ಲಾ ಪ್ರತಿಭಟನಾ ಕಾರರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಲಾಯಿತು.
ಪ್ರ

ತಿಭಟನೆಯಲ್ಲಿ ಮುಖಂಡರಾದ ಪ್ರಾಂತ ರೈತ ಸಂಘದ ಭರತ್ ರಾಜ್, ಕೃಷಿ ಕೂಲಿಕಾರರ ಸಂಘದ ಶಿವಮಲ್ಲಯ್ಯ, ರಾಮಣ್ಣ, ಆನಂದ್, ಸಿಐಟಿಯುನ ಶೀಲಾ ಮಂಜುಳ, ಜಿ ರಾಮಕೃಷ್ಣ, ಮಹಾದೇವಮ್ಮ, ಪ್ರಾಂತ ರೈತ ಸಂಘದ ಲಿಂಗರಾಜ ಮೂರ್ತಿ, ಅಂಗನವಾಡಿ ನೌಕರರ ಸಂಘದ ಲತಾ, ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ