Thursday, September 19, 2024

ಪ್ರಾಯೋಗಿಕ ಆವೃತ್ತಿ

ಪೌರಕಾರ್ಮಿಕರು ಮುಖ್ಯವಾಹಿನಿಗೆ ಬರಬೇಕು – ಡಾ.ಕೆ.ಅನ್ನದಾನಿ

ಸ್ವಚ್ಚತಾ ಕಾರ್ಯನಿರ್ವಹಿಸುವ ಪೌರಕಾರ್ಮಿಕರು ಶಿಕ್ಷಣ, ಅರ್ಥಿಕತೆ, ರಾಜಕೀಯದಲ್ಲಿ ಸದೃಢರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಡಾ.ಕೆ.ಅನ್ನದಾನಿ ಹೇಳಿದರು.

ಮಳವಳ್ಳಿ ಪಟ್ಟಣದ ಪುರಸಭೆ ವತಿಯಿಂದ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಮನೆಯಿಂದ ಹೊರಬರಬೇಕಾದರೂ ಭಯ ಪಡುತ್ತಿದ್ದ ಸಂದರ್ಭದಲ್ಲಿ ಪೌರ ಕಾರ್ಮಿಕರು, ತಮ್ಮ ಜೀವವನ್ನು ಒತ್ತೆ ಇಟ್ಟು ಪಟ್ಟಣವನ್ನು ಸ್ವಚ್ಚಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ, ಪೌರ ಕಾರ್ಮಿಕರ ವೃತ್ತಿಯನ್ನು ಪ್ರತಿಯೊಬ್ಬರೂ ಗೌರವಿಸಬೇಕಿದೆ ಎಂದರು.

ಪೌರ ಕಾರ್ಮಿಕ ಸಂಘದ ಮುಖಂಡ ಕುಮಾರ್ ಮಾತನಾಡಿ, ಪುರಸಭೆ ಮತ್ತು ತಾಲ್ಲೂಕು ಆಡಳಿತ ಸ್ಮಶಾನ ಜಾಗವನ್ನು ಗೊತ್ತುಪಡಿಸದಿರುವುದರಿಂ ಅಂತ್ಯ ಸಂಸ್ಕಾರ ಮಾಡಲು ಆಗುತ್ತಿಲ್ಲ, ಕೂಡಲೇ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿ ಶಾಸಕರು, ಪೌರ ಕಾರ್ಮಿಕರು ಕಳೆದ 30 ವರ್ಷಗಳಿಂದ ವಾಸವಾಗಿರುವುದರಿಂದ ಹಕ್ಕು ಪತ್ರ ಆಧರಿಸಿ ಖಾತೆ ಮಾಡಿಕೊಡಬೇಕು, ಸಶ್ಮಾನ ಸಮಸ್ಯೆಯನ್ನು ಕೂಡಲೇ ಮುಖ್ಯಾಧಿಕಾರಿಗಳು ಮತ್ತು ತಹಶೀಲ್ದಾರ್ ಬಗೆಹರಿಸಬೇಕು, ಮುಂದಿನ ದಿನಗಳಲ್ಲಿ ಸಮಸ್ಯೆ ಮರುಕಲಿಸಿದರೇ ಅಧಿಕಾರಿಗಳೇ ಜವಾಬ್ದಾರಿ ಆಗುತ್ತಾರೆಂದು ಎಚ್ಚರಿಸಿದರು.

ಕಳೆದ 30 ವರ್ಷಗಳಿಂದ ವಾಸ ಮಾಡುತ್ತಿರುವ ಮನೆ ಶಿಥಿಲಗೊಂಡು ಬಿದ್ದು ಹೋಗುವ ಪರಿಸ್ಥಿತಿ ಉಂಟಾಗಿದೆ,  ಮನೆ ಕಟ್ಟಿಕೊಳ್ಳಲು ಸರ್ಕಾರ ಹಣ ನೀಡಿದರೂ ಕೂಡ ಮನೆಗೆ ಖಾತೆ ಮಾಡಿಸಿಕೊಳ್ಳದ ಹಿನ್ನೆಲೆಯಲ್ಲಿ ಸೌಲಭ್ಯವನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಒಂದೇ ಮನೆಯಲ್ಲಿ ಮೂರು ಕುಟುಂಬಗಳು ವಾಸ ಮಾಡುತ್ತಿರುವುದರಿಂದ ಪ್ರತಿಯೊಬ್ಬರಿಗೂ ನಿವೇಶನ ಕೊಡಿಸಬೇಕೆಂದು ಮನವಿ ಮಾಡಿದರು.

ಪುರಸಭೆ ಸದಸ್ಯ ಸಿದ್ದರಾಜು ಶಾಸಕರಿಗೆ ಮನವಿ ಪತ್ರ ಸಲ್ಲಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ, ಪಟ್ಟಣದ ಜನಸಂಖ್ಯೆ ಅನುಗುಣವಾಗಿ ಪೌರ ಕಾರ್ಮಿಕರನ್ನು ನೇಮಿಸಬೇಕು, ಪುರಸಭೆಯ ನೀರು ಗಂಟಿಗಳು, ಚಾಲಕರನ್ನು ಪೌರಕಾರ್ಮಿಕರನ್ನಾಗಿ ಅವಕಾಶ ಮಾಡಿಕೊಡಬೇಕು, ಹೊರ ಗುತ್ತಿಗೆ ಪದ್ದತಿಯನ್ನು ರದ್ದು ಪಡಿಸಬೇಕು, ಪೌರಕಾರ್ಮಿಕರ ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ವಿಶೇಷ ಯೋಜನೆಯನ್ನು ನೀಡಬೇಕು, ಗುಂಪು ಮನೆ ನಿಮಾ೯ಣ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಡುವುದು ಸೇರಿದಂತೆ ಪೌರ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಂದೆ ನಡೆಯುವಂತ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರಬೇಕೆಂದು ಮನವಿ ಮಾಡಿದರು.

ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೌರಕಾರ್ಮಿಕರಿಗೆ ಬಹುಮಾನ ವಿತರಿಸಲಾಯಿತು, ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ ಹಿರಿಯ ಪೌರ ಕಾರ್ಮಿಕರನ್ನು ಅಭಿನಂದಿಸಿ ಗೌರವಿಸಲಾಯಿತು. ಪುರಸಭೆ ಅಧ್ಯಕ್ಷೆ ರಾಧ ನಾಗರಾಜು, ಉಪಾಧ್ಯಕ್ಷ ಪ್ರಶಾಂತ್, ಮಾಜಿ ಉಪಾಧ್ಯಕ್ಷ ನಂದಕುಮಾರ್, ಮಾಜಿ ಅಧ್ಯಕ್ಷ ದೊಡ್ಡಯ್ಯ, ಪುರಸಭೆ ಮುಖ್ಯಾಧಿಕಾರಿ ಪಿ.ಹರಿಪ್ರಸಾದ್ ಸೇರಿದಂತೆ ಪುರಸಭೆ ಸದಸ್ಯರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!