Thursday, November 19, 2026

ಪ್ರಾಯೋಗಿಕ ಆವೃತ್ತಿ

ಹಕ್ಕುಪತ್ರಕ್ಕೆ ಆಗ್ರಹಿಸಿ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಮುತ್ತಿಗೆ


  • ಹಲವು ದಶಕಗಳಿಂದ ಬಗೆಹರಿಯದ ಸಮಸ್ಯೆ

  • ಕಾಳಿಕಾಂಭ ಸ್ಲಂ ನಿವಾಸಿಗಳ ಪ್ರತಿಭಟನೆ

ಮಂಡ್ಯ ನಗರದ ಕಾಳಿಕಾಂಭ ಸ್ಲಂ ನಿವಾಸಿಗಳ ವಿವೇಶನಗಳ ವಿವಾದವನ್ನು ಬಗೆಹರಿಸದೇ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆಂದು ಆರೋಪಿಸಿ ಕರ್ನಾಟಕ ಜನಶಕ್ತಿ ಸಂಘಟನೆ ನೇತೃತ್ವದಲ್ಲಿ ಸ್ಲಂ ನಿವಾಸಿಗಳು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಮಂಡ್ಯ ಉಪ ವಿಭಾಗದ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಸಿದ್ದರಾಜು ನೇತೃತ್ವದಲ್ಲಿ ಕಚೇರಿ ಎದುರು ಪ್ರತಿಭಟನೆ ಕುಳಿತ  ಸ್ಲಂ ನಿವಾಸಿಗಳು, ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದರು.

ಹಲವು ದಶಕಗಳಿಂದ ಕಾಳಿಕಾಂಭ ಸ್ಲಂ ನಿವೇಶನ ವಿವಾದ ಜೀವಂತವಾಗಿದೆ, ಇದನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗುತ್ತಿಲ್ಲ, ಬದಲಿಗೆ ಪಟ್ಟಭದ್ರ ಹಿತಾಶಕ್ತಿಗಳ ಜೊತೆ ಕೈಜೋಡಿಸಿ, ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸ್ಲಂ ವಿವಾದವು ಹೈಕೋರ್ಟ್ ಮೆಟ್ಟಿಲೇರಿದ್ದು, ಸ್ಲಂ ಜನರ ಪರವಾಗಿ ಕಾರ್ಯ ನಿರ್ವಹಿಸಬೇಕಾದ ಅಧಿಕಾರಿಗಳು ನ್ಯಾಯಾಲಯಕ್ಕೆ ಸರಿಯಾದ ದಾಖಲೆಗಳನ್ನು ಸಲ್ಲಿಕೆ ಮಾಡದೆ, ಪಟ್ಟಭದ್ರರ ಜೊತೆ ಕೈಜೋಡಿಸಿ ನಮಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ಸರಿಯಾದ ರೀತಿಯಲ್ಲಿ ಮೊಕದ್ದಮೆಯನ್ನು ನಿರ್ವಹಿಸಬೇಕು, ಇಲ್ಲವಾದಲ್ಲಿ ಎಲ್ಲಾ ಕಡತಗಳನ್ನು ನಮಗೆ ನೀಡಿದರೆ, ನಾವೇ ನ್ಯಾಯಾಲಯದಲ್ಲಿ ಮೊಕದ್ದಮೆ ನಿರ್ವಹಣೆ ಮಾಡಿ ನ್ಯಾಯ ಪಡೆದುಕೊಳ್ಳುತ್ತೇವೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಕಾಶ್, ಜರ್ನಾಧನ್, ಶಿವಲಿಂಗಣ್ಣ, ಗೋಪಾಲ್, ಶಾಂತ, ಶಿಲ್ಪ, ಲಕ್ಷ್ಮಿ ಮುಂತಾದವರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ