ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಡ್ಯ ನಗರಸಭೆ, ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮರೀಗೌಡ ಬಡಾವಣೆಯಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಡ್ರೈವ್ ಗೆ ಕೇಂದ್ರ ಇಂಧನ ಮತ್ತು ಭಾರಿ ಕೈಗಾರಿಕೆಗಳ ರಾಜ್ಯ ಖಾತೆ ಸಚಿವ ಕ್ರಿಶನ್ ಪಾಲ್ ಗುರ್ಜರ್ ಅವರು ಇಂದು ಬೆಳಿಗ್ಗೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್, ಅಪರ ಜಿಲ್ಲಾಧಿಕಾರಿ ವಿ.ಆರ್. ಶೈಲಜಾ, ಉಪವಿಭಾಗಾಧಿಕಾರಿ ಆರ್ ಐಶ್ವರ್ಯ, ತಹಶೀಲ್ದಾರ್ ಅಹಮದ್, ಮಂಡ್ಯ ನಗರಸಭೆ ಅಧ್ಯಕ್ಷ ಹೆಚ್.ಎಸ್. ಮಂಜು, ಆಯುಕ್ತ ಆರ್.ಮಂಜುನಾಥ್,ಸದಸ್ಯರಾದ ಕುಮಾರ್, ಶ್ರೀಧರ್, ಮೀನಾಕ್ಷಿ ಪುಟ್ಟಸ್ವಾಮಿ, ರಜಿನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನಂತರ ಉಮ್ಮಡಹಳ್ಳಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಟ್ಟು ನೀರುಣಿಸಿದರು.