Friday, November 20, 2026

ಪ್ರಾಯೋಗಿಕ ಆವೃತ್ತಿ

ಸ್ವಚ್ಛ ಭಾರತ್ ಅಭಿಯಾನದಡಿ ಸ್ವಚ್ಛತಾ ಮ್ಯಾರಾಥಾನ್ – ಪಿ. ರವಿಕುಮಾರ್

ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಹಾಗೂ ಫಿಟ್‌ನೆಸ್ ಉತ್ತೇಜಿಸಲು ಮಾರ್ಚ್ 8 ರಂದು ನಗರದ ಜಿಲ್ಲಾ ಕ್ರೀಡಾಂಗಣದಿಂದ “ನಮ್ಮ ನಡೆ ಸ್ವಚ್ಛತೆಯ ಕಡೆ -ರನ್ ಫಾರ್ ಮಂಡ್ಯ” ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ವಿಧಾನಸಭಾ ಶಾಸಕ ರವಿಕುಮಾರ್ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಗಳ ಕಚೇರಿಯಲ್ಲಿ ಸ್ವಚ್ಛ ಭಾರತ್ ಅಭಿಯಾನದಡಿ “ನಮ್ಮ ನಡೆ ಸ್ವಚ್ಛತೆಯ ಕಡೆ- ರನ್ ಫಾರ್ ಮಂಡ್ಯ” ಘೋಷವಾಕ್ಯದೊಂದಿಂಗೆ ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮಾರ್ಚ್ 8 ರಂದು ಬೆಳಿಗ್ಗೆ 6.30 ಗಂಟೆಗೆ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ 25 ಸಾವಿರ ಜನರು ಭಾಗವಹಿಸುವಂತೆ ಈ ಮ್ಯಾರಾಥಾನ್ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಥತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಸಂಘಟನೆಗಳು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾರ್ಚ್ 8 ರಂದು ನಡೆಯುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಬೇಕು. ಈ ಸಂಬಂಧ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಕುಡಿಯುವ ನೀರು, ಆಂಬುಲೆನ್ಸ್ ವ್ಯವಸ್ಥೆ ಹಾಗೂ ಉಪಹಾರದ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಮಾರ್ಚ್ 8 ರಂದು ನಡೆಯುವ ಮ್ಯಾರಾಥಾನ್ ಕಾರ್ಯಕ್ರಮಕ್ಕೆ ಹೊರಗಿನಿಂದ ಭಾಗವಹಿಸಲು ಅನುಕೂಲವಾಗುವಂತೆ ಆನ್ ಲೈನ್ ನೊಂದಣಿ ವ್ಯವಸ್ಥೆಗೆಷಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸರ್ಕಾರಿ ನೌಕರರು ಎನ್‌.ಜಿ.ಓಗಳು ಮತ್ತು ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಸಂಬಂಧ ಅಗತ್ಯ ಸಿದ್ಥತೆ ಮಾಡಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ ಹಾಗೂ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ