Thursday, November 19, 2026

ಪ್ರಾಯೋಗಿಕ ಆವೃತ್ತಿ

ಗ್ರಾಮ ಸ್ವಚ್ಚತೆ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ರಾಮಲಿಂಗಯ್ಯ

ಗ್ರಾಮ ಸ್ವಚ್ಚತೆ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿರುವುದರಿಂದ ಜನಸಮುದಾಯದಲ್ಲಿ ಸ್ವಚ್ಚತೆಯ ಆಶಯಗಳನ್ನು ಬಲ ಪಡಿಸಲು ಸ್ವಚ್ಚತೋತ್ಸವ ಪಾಕ್ಷಿಕ ಅಭಿಯಾನವನ್ನು ತಾಲ್ಲೂಕಿನಾಧ್ಯಂತ ಆಚರಿಸಲಾಗುತ್ತಿದೆ ಎಂದು ತಾ.ಪಂ ಇಓ ರಾಮಲಿಂಗಯ್ಯ ತಿಳಿಸಿದರು.

ಭಾರತೀನಗರದ ಗ್ರಾ.ಪಂ ವತಿಯಿಂದ ಸೆ.17 ರಿಂದ ಅಕ್ಟೋಬರ್ 2 ವರೆಗೆ ಹಮ್ಮಿಕೊಂಡಿರುವ ಸ್ವಚ್ಚತಾ ಸೇವಾ ಕಾರ್ಯಕ್ರಮದ ಅಂಗವಾಗಿ ನಡೆದ ಭಾರತೀನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ಗ್ರಾಮಗಳನ್ನು, ಧಾರ್ಮಿಕ ಸ್ಥಳಗಳನ್ನು, ಶಾಲಾ-ಕಾಲೇಜಿನ ಆವರಣ, ಕೆರೆಕಟ್ಟೆಗಳನ್ನು, ಕುಡಿಯುವ ನೀರಿನ ಟ್ಯಾಂಕ್ ಗಳನ್ನು ಸ್ವಚ್ಚ ಮಾಡಲಾಗುವುದು. ಜೊತೆಗೆ ಪರಿಸರ ಸಂರಕ್ಷಣೆ ದೃಷ್ಠಿಯಿಂದ ಗಿಡ ನೆಡುವ ಕಾರ್ಯಕ್ರಮ ಹಾಗೂ ಆರೋಗ್ಯ ದೃಷ್ಠಿಯಿಂದ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗುವುದೆಂದು ವಿವರಿಸಿದರು.

ಗಾಂಧೀಜಿ ಅವರು ಕಂಡ ಕನಸ್ಸಿನಂತೆ ಗ್ರಾಮಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಲಾಗುವುದು. ಹಾಗೆಯೇ ಪ್ರಧಾನಿ ನರೇಂದ್ರಮೋದಿ ಅವರ ಪರಿಕಲ್ಪನೆಯಂತೆ ಸ್ವಚ್ಚಭಾರತವನ್ನಾಗಿ ಮಾಡುವ ಉದ್ದೇಶ ನಮ್ಮದಾಗಬೇಕು ಎಂದರು.

ಇದೇ ವೇಳೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎನ್.ಸುಧಾ ಅವರು ಪೌರಕಾರ್ಮಿಕರಿಗೆ, ಗ್ರಾ.ಪಂ ಸಿಬ್ಬಂದಿಗಳಿಗೆ ಹಾಗೂ ಸದಸ್ಯರಿಗೆ ಸ್ವಚ್ಚತೆ, ಪರಿಸರ ಮತ್ತು ಆರೋಗ್ಯದ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಸೈಕಲ್ ಜಾಥಾ :

ತಾ.ಪಂ ಸಹಾಯಕ ನಿರ್ದೇಶಕ ಮಂಜುನಾಥ್ ಅವರು ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಜಯಂತಿಯ ಅಂಗವಾಗಿ ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಚತಾ ಹೀ-ಸೇವಾ ಅಥವಾ ಸ್ವಚ್ಚತೆಯೇ ಸೇವೆ ಎಂಬ ವಿಶೇಷ ಜನಾಂದೋಲನ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಭಾರತೀನಗರ ಗ್ರಾ.ಪಂನಿಂದ ಸೈಕಲ್ ಜಾಥಾದ ಮೂಲಕ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಇದೇ ವೇಳೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಅರ್ಜುನ್, ಗ್ರಾ.ಪಂ ಅಧ್ಯಕ್ಷೆ ಸೌಭಾಗ್ಯರಮೇಶ್, ಉಪಾಧ್ಯಕ್ಷೆ ಸುವರ್ಣ, ಸದಸ್ಯರಾದ ಪುಟ್ಟರಾಮು, ಕೆ.ವಿ.ಶ್ರೀನಿವಾಸ್, ವೆಂಕಟೇಶ್, ಮಂಜುನಾಥ್, ಮಿಥುನ್, ಕೌಶಲ್ಯ, ಕಾರ್ಯದರ್ಶಿ ಹರೀಶ್ ಸೇರಿದಂತೆ ಪಂಚಾಯಿತಿ ನೌಕರರು, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ