ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೊಂದಾಯಿತ ಕಟ್ಟಡ ಮತ್ತು ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಮಳವಳ್ಳಿ ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ಕ್ಲಿಯರ್ ಮೇಡಿ ರೇಡಿಯಂಟ್ ಹಾಸ್ಪಿಟಲ್ ಮೈಸೂರುರವರು ಮೊಬೈಲ್ ವ್ಯಾನ್ ಮೂಲಕ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಯೋಜಕರು ವೆಂಕಟೇಶ್ ಮಾತನಾಡಿ, ನೊಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರು ಲೇಬರ್ ಕಾರ್ಡ್ ಹೊಂದಿರುವ ಅರ್ಹ ಫಲಾನುಭವಿಗಳಿಗೆ ತಪಾಸಣೆ ನಡೆಸಲಾಗುವುದು. ಫಲಾನುಭವಿಗಳು ಲೇಬರ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಹಾಜರುಪಡಿಸಿ ತಪಾಸಣೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದರು.
ಶಿಬಿರದಲ್ಲಿ ಅರ್ಹ ನೋಂದಾಯಿತ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ, ವಿವಿಧ 20 ರೀತಿಯ ಪರೀಕ್ಷೆ, ಕಣ್ಣಿನ ತಪಾಸಣೆ, ಕಿವಿ ಪರೀಕ್ಷೆ ನಡೆಸಲಾಯಿತು, ನಂತರ ಕಾರ್ಮಿಕರಿಗೆ ವೈದ್ಯಕೀಯ ವರದಿಗಳನ್ನು ನೀಡಲಾಯಿತು. ಶಿಬಿರದಲ್ಲಿ ಸುಮಾರು 50ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರು ಪಾಲ್ಗೊಂಡಿದ್ದರು.
ಡಾ. ಮಲ್ಲಿನಾ ಗ್ರೇಸ್. ಡಾ. ಸುಮಾ. ಡಾ. ಶ್ರವಣಿ ಸಿಬ್ಬಂದಿ ಕಾರ್ಮಿಕರಿಗೆ ತಪಾಸಣೆ ನಡೆಸಿದರು.




