Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಉಚಿತ ಸೀಳುತುಟಿ ಶಸ್ತ್ರ ಚಿಕಿತ್ಸಾ ಶಿಬಿರ : ಡಾ.ಶಿವಕುಮಾರ್

ಆದಿಚುಂಚನಗಿರಿ ಆಸ್ಪತ್ರೆಯ ವತಿಯಿಂದ ಸೀಳು ತುಟಿ, ಸೀಳು ಅಂಗುಳ ಮತ್ತು ಸುಟ್ಟಗಾಯಗಳಿಂದ ಉಂಟಾದ ವಿರೂಪಗಳ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಡಿಸೆಂಬರ್ 1ರಂದು 13ರವರೆಗೆ ನಾಗಮಂಗಲ ತಾಲ್ಲೂಕಿನ ಬಿ.ಜಿ ನಗರದ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಕೆ.ಎಂ.ಶಿವಕುಮಾರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಶಿಬಿರವನ್ನು ಆದಿಚುಂಚನಗಿರಿ ಆಸ್ಪತ್ರೆ, ಅಮೆರಿಕಾದ ರೂಟಾಪ್ಲಾಸ್ಟ್ ಇಂಟರ್ ನ್ಯಾಷನಲ್ ಸಂಸ್ಥೆ, ರೋಟರಿ ಸಂಸ್ಥೆಯ ಸಹಯೋಗದೊಂದಿಗೆ ನಡೆಸಲಾಗುತ್ತಿದ್ದು, 2ರಿಂದ 18 ವರ್ಷದ ಯುವಕರವರೆಗೆ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಬಹುದಾಗಿದೆ ಎಂದರು.

ಅಮೆರಿಕಾದ ರೂಟಾಪ್ಲಾಸ್ಟ್ ಇಂಟರ್ ನ್ಯಾಷನಲ್ ಸಂಸ್ಥೆಯ ನುರಿತ 30 ತಜ್ಞ ವೈದ್ಯರ ತಂಡದಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದ್ದು, ಈ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ, ಔಷಧೋಪಚಾರ, ವಾರ್ಡ್ ಸೌಲಭ್ಯ ನೀಡಲಿದ್ದು, ಶಿಬಿರಾರ್ಥಿಗಳ ಸಹಾಯಕರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಈಗಾಗಲೇ ಪೂರ್ವ ನೊಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಆಸಕ್ತರು 9945558579, 9900758946, 7975012982, 08234-287575, 08234-287011 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದು, ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ