Wednesday, November 18, 2026

ಪ್ರಾಯೋಗಿಕ ಆವೃತ್ತಿ

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ! ; ಡಿ.ಕೆ.ಶಿವಕುಮಾರ್

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ. ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ. ನಾನು ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆ. ಸತ್ಯವನ್ನು ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮ ಮಿತ್ರರಲ್ಲಿ ನನ್ನ ಮನವಿ ಎಂದು ಹೇಳಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ