Friday, November 20, 2026

ಪ್ರಾಯೋಗಿಕ ಆವೃತ್ತಿ

ವಿ.ವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ: ಸಿಎಂ ಸಿದ್ದರಾಮಯ್ಯ

ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ಅನ್ನು ಎಸ್‌.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಿ, ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ ಅವರು, ಲ್ಯಾಪ್ ಟಾಪ್ ವಿತರಿಸುವ ಸಂಬಂಧ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆ ಅಡಿ 230 ಕೋಟಿ ರೂ. ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚಿಸಿದರು.

ವಿ.ವಿ ಗಳಲ್ಲಿರುವ ಎಲ್ಲಾ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಲ್ಯಾಪ್ ಟಾಪ್ ವಿತರಿಸಬೇಕಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿಯು ಕೈಗಾರಿಕೋದ್ಯಮಿಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ, ಎಂಜಿನಿಯರಿಂಗ್‌ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಇಂದಿನ ಸಭೆಯಲ್ಲಿ ಸೂಚಿಸಲಾಯಿತು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಆರ್ಥಿಕ ಇಲಾಖೆಯ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತಿತರ ಹಿರಿಯ ಅಧಿಕಾರಿಗಳು, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ