Thursday, September 19, 2024

ಪ್ರಾಯೋಗಿಕ ಆವೃತ್ತಿ

”ಸಾರ್ವಜನಿಕರ ಹಿತದೃಷ್ಠಿಯಿಂದ ಜೀರೋ ಟ್ರಾಫಿಕ್ ತ್ಯಜಿಸಿದ ಸಿಎಂ ಸಿದ್ದರಾಮಯ್ಯ”

ಸಿದ್ದರಾಮಯ್ಯ ಅವರು ಶನಿವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಇಂದು (ರವಿವಾರ) ಅವರು, ತಮಗಿರುವ ಜೀರೊ ಟ್ರಾಫಿಕ್ ಸೌಲಭ್ಯವನ್ನು ತ್ಯಜಿಸಿದ್ದಾರೆ.

“>

ಸಾರ್ವಜನಿಕರಿಗೆ ತಮ್ಮಿಂದಾಗುವ ತೊಂದರೆ ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ತಮ್ಮ ವಾಹನ ಸಂಚಾರಕ್ಕೆ ನೀಡಿರುವ ಜೀರೋ ಟ್ರಾಫಿಕ್‌ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು ”ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ವಾಹನ ಸಂಚರಿಸುವ ಸಂದರ್ಭದಲ್ಲಿ ಅವರ ಸುಗಮ ಸಂಚಾರಕ್ಕೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರಿಂದ ಸಿಗ್ನಲ್‌ಗಳಲ್ಲಿ ವಾಹನ ಸವಾರರು ಹತ್ತಾರು ನಿಮಿಷ ಕಾಯಬೇಕಾಗುತ್ತದೆ. ಇದು ಸಾರ್ವಜಕರಿಗೆ ತೊಂದರೆ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗುತ್ತದೆ. ಇದರಿಂದ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಅವರು ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!