Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೇಂದ್ರದಿಂದ ನಯಾಪೈಸೆ ಬರ ಪರಿಹಾರದ ಹಣ ಬಿಡುಗಡೆಯಾಗಿಲ್ಲ : ಸಿಎಂ ಸಿದ್ದರಾಮಯ್ಯ

ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಎಂಬ ಹ್ಯಾಶ್‌ಟ್ಯಾಗ್ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸರಣಿ ಪೋಸ್ಟ್ ಮಾಡಿರುವ ಅವರು, ”ಪ್ರಧಾನಿ ನರೇಂದ್ರ ಮೋದಿ ಅವರೇ, 2019ರಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ರಾಜ್ಯ ಸಾವು ನೋವಿನಲ್ಲಿ ಮುಳುಗಿತು, ಲಕ್ಷಾಂತರ ಕುಟುಂಬಗಳು ಮನೆ, ಆಸ್ತಿಪಾಸ್ತಿ ಕಳೆದುಕೊಂಡು ಬೀದಿಪಾಲಾದವು, ಆದರೂ ನೀವು ಕರ್ನಾಟಕಕ್ಕೆ ಬರಲಿಲ್ಲ. ರಾಜ್ಯದ ಜನರಿಗಾದ ಅಪಾರ ನಷ್ಟಕ್ಕೆ ಕೇಂದ್ರದ ನೆರವಿನ ಮೊರೆ ಹೋದರೆ ಮತ್ತೆ ಕನ್ನಡಿಗರಿಗೆ ಸಿಕ್ಕಿದ್ದು ಬಿಡಿಗಾಸು ಮಾತ್ರ. ನಿಮ್ಮ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ” ಎಂದು ಕಿಡಿಕಾರಿದ್ದಾರೆ.

“>

”2017ರಲ್ಲಿ ಬರದಿಂದ ತತ್ತರಿಸಿಹೋಗಿದ್ದ ಕರ್ನಾಟಕದ ಜನತೆ ಕೇಂದ್ರದ ನೆರವಿಗಾಗಿ ನಿಮ್ಮತ್ತ ನೋಡುತ್ತಿದ್ದರು. ಆದರೆ ನಿಮ್ಮಿಂದ ನಮಗೆ ಸಿಕ್ಕಿದ್ದು ಬಿಡಿಗಾಸು ಪರಿಹಾರ. ಪ್ರಧಾನಿ ನರೇಂದ್ರ ಮೋದಿ ಅವರೇ ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ? ನಿಮ್ಮ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ” ಎಂದಿದ್ದಾರೆ.

“>

”ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ, ಈ ವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ, ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ನಿಮ್ಮ ನೇತೃತ್ವದ ಕೇಂದ್ರ ಬಿಜೆಪಿ  ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ” ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!