Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಳೆ ನೀರಿನಲ್ಲಿ ಸಾವಿಗೀಡಾದ ಯುವತಿ ಕುಟುಂಬಕ್ಕೆ ಸಿಎಂ ಸಾಂತ್ವನ : ₹ 5 ಲಕ್ಷ ಪರಿಹಾರ

ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ಮಾಡಿ ಸಾಂತ್ವನ ಹೇಳಿದರು.

nudikarnataka.com

ಮುಖ್ಯಮಂತ್ರಿ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳಿದರು. ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.

ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ