Friday, September 20, 2024

ಪ್ರಾಯೋಗಿಕ ಆವೃತ್ತಿ

ಮನುಸ್ಮೃತಿಯ ಪಳೆಯುಳಿಕೆಗಳನ್ನು ಸುಟ್ಟು ಹಾಕಬೇಕು: ಸಿಎಂ ಸಿದ್ದರಾಮಯ್ಯ

ಅಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಾತಿ ಮತ್ತು ಲಿಂಗತಾರತಮ್ಯವನ್ನು ಸಾರುವ ಅಲಿಖಿತ ಸಂವಿಧಾನ ಮನುಸ್ಮೃತಿಯನ್ನು ಸುಟ್ಟುಹಾಕಿದ್ದರು. ಇಂದು ನಾವೆಲ್ಲರೂ ನಮ್ಮೊಳಗೆ ಇನ್ನೂ ಉಳಿದಿರಬಹುದಾದ ಆ ಮನುಸ್ಮೃತಿಯ ಪಳೆಯುಳಿಕೆಗಳನ್ನು ಸುಟ್ಟು ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

“>

ಈ ಬಗ್ಗೆ ಟ್ವೀಟ್ ಮಾಡಿರುವ ಅವರು,  ಮನುಸ್ಮೃತಿಯಂತಹ ಅಲಿಖಿತ ಸಂವಿಧಾನದ ನಾಶವಾಗದೆ ಬಾಬಾ ಸಾಹೇಬ್ ಅಂಬೇಡ್ಕರ್ ದೇಶಕ್ಕೆ ನೀಡಿರುವ ಲಿಖಿತ ಸಂವಿಧಾನದ ಸಂಪೂರ್ಣ ಅನುಷ್ಠಾನ ಅಸಾಧ್ಯ. ನಾಡಿನ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ಧರ್ಮಗ್ರಂಥವಾಗಲಿ. ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಬದುಕುವ ಮೂಲಕ ಮನುವಾದವನ್ನು ಹಿಮ್ಮೆಟ್ಟಿಸೋಣ ಎಂದು ಅವರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!