Friday, September 20, 2024

ಪ್ರಾಯೋಗಿಕ ಆವೃತ್ತಿ

‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಗಂಭೀರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎನ್ನಲಾಗಿರುವ ಪ್ರಕರಣ ಈಗ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ವೇದಿಕೆ ಮಾಡಿಕೊಟ್ಟಿದೆ. ಈ ವಿಚಾರವಾಗಿ ಮಾಧ್ಯಮಗಳಿಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಎಫ್‌ಎಸ್ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದರು.

“ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಭೀತಾದರೆ ಯಾರೇ ಆಗಲಿ ಕಠಿಣ ಕ್ರಮ ವಹಿಸಲಾಗುವುದು. ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಕೂಗುವವರಿಗೆ ಇಲ್ಲಿಯಾದರೇನು, ಎಲ್ಲಾದರೇನು ? ನಿಜ ಆಗಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ಹೇಳಿದರು.

“>

“ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ನಿಜವಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಕಾಲ್ಪನಿಕ ಘಟನೆ: ಸಚಿವ ಪ್ರಿಯಾಂಕ್ ಖರ್ಗೆ

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, “ಇದು ಕಾಲ್ಪನಿಕ ಘಟನೆಯಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ಮುಖಭಂಗವಾಗಿದೆ. ಘೋಷಣೆ ಕೂಗಿರುವ ಆಡಿಯೋದಲ್ಲಿ ಸೈಯದ್ ಸಾಬ್, ನಾಸಿರ್ ಹುಸೇನ್ ಜಿಂದಾಬಾದ್ ಅಂತ ಹೇಳಿದ್ದಾರೆ. ನಾವು ಜವಬ್ದಾರಿಯುತವಾಗಿಯೇ ಪರಿಶೀಲನೆ ಮಾಡಲು ಹೇಳಿದ್ದೆವು. ಪಾಕಿಸ್ತಾನದ ಪರವಾಗಿ ಯಾವುದೇ ಘೋಷಣೆ ಕೂಗಿಲ್ಲ. ವಿಡಿಯೋ ತುಣುಕುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಿಕೊಡಲಾಗಿದೆ” ಎಂದರು.

ಮೂರು ವಿಶೇಷ ತಂಡಗಳ ರಚನೆ

“ಕೆಲವು ಮಾಧ್ಯಮದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಬಗ್ಗೆ ವರದಿಯಾಗಿವೆ. ಖಾಸಗಿಯಾಗಿ ಆಡಿಯೋ ಚೆಕ್ ಮಾಡಲಾಗಿದೆ. ಮಾಧ್ಯಮಗಳು ಸರ್ಕಾರವನ್ನು ನೇಣಿಗೆ ಹಾಕಲು ಸಿದ್ಧವಾಗಿದ್ದರೆ ನಾವೇನು ಮಾಡಲು ಆಗುತ್ತದೆ? ಘೋಷಣೆ ಕೂಗಿಲ್ಲ ಅಂತ ಹೇಳಿದ್ದೇನೆ. ಸಮರ್ಥನೆ ನಾನು ಮಾಡಿಲ್ಲ. ಸರ್ಕಾರದಿಂದ 11 ಗಂಟೆಗೆ ರಿಪೋರ್ಟ್ ಬರುತ್ತದೆ ನೋಡೋಣ. ಇದು ವೈಯಕ್ತಿಕ ಘೋಷಣೆ, ಪಕ್ಷದ ಘೋಷಣೆ ಅಲ್ಲ. ಸುಮ್ಮನೇ ಆರೋಪ ಮಾಡಲಾಗದು. ಸುಳ್ಳು ಸುದ್ದಿಗೆ ಕಾನೂನು ಕೂಡ ಇದೆ. ಬಿಜೆಪಿಯವರು ಹತಾಶರಾಗಿ ಆರೋಪ ಮಾಡುತ್ತಿದ್ದಾರೆ” ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!