Thursday, July 25, 2024

ಪ್ರಾಯೋಗಿಕ ಆವೃತ್ತಿ

ಮೋದಿ ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ: ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ” ಎಂದು ಹೇಳಿದರು.

“ರಾಹುಲ್ ಗಾಂಧಿಯವರು ಲೋಕಸಭಾ ವಿರೋಧ ಪಕ್ಷದ ಸ್ಥಾನವನ್ನು ಸ್ವೀಕರಿಸಬೇಕೆಂದು ನಾನು ಕೂಡ ಸಲಹೆ ನೀಡಿದ್ದೆ. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಬೇಕಾದರೆ ನೀವೇ ವಿರೋಧಪಕ್ಷದ ನಾಯಕರಾಗಬೇಕೆಂದು ಕಾರ್ಯಕಾರಿಣಿ ಸಮಿತಿ ಹಾಗೂ ನಾನೂ ಒತ್ತಾಯ ಮಾಡಿದ್ದೆ. ರಾಹುಲ್ ಗಾಂಧಿ ಯವರು ಈ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು. ನಾನು ಅವರಿಗೆ ತುಂಬಿ ಹೃದಯದ ಅಭಿನಂದನೆ ತಿಳಿಸಬಯಸುತ್ತೇನೆ” ಎಂದರು.

ಹಾಲಿನ ಉತ್ಪಾದನೆ 99 ಲಕ್ಷಕ್ಕಿಂತ ಹೆಚ್ಚಾಗಿದೆ

“ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷಕ್ಕಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ. ಅರ್ಧ ಲೀಟರ್ ಪ್ಯಾಕೆಟ್ ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗುಲುವ 2.10 ರೂ.ಗಳನ್ನು ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ” ಎಂದು ಪುನರುಚ್ಚರಿಸಿದರು.

“ಮಾರುಕಟ್ಟೆ ಅಗತ್ಯವಿದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗಿರುವುದನ್ನು ಹೆಚ್ಚು ನೀಡಿ ಅದಕ್ಕೆ ತಕ್ಕ ದರವನ್ನಷ್ಟೇ ನಿಗದಿ ಮಾಡಲಾಗಿದೆ” ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!