ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ ರೂ. 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ಇಂದು ಮುಖ್ಯಮಂತ್ರಿ @siddaramaiah ಅವರು ವಿತರಿಸಿ ಮಾತನಾಡಿದರು.
1/3#ಸರ್ವರಿಗೂಸಮಪಾಲು pic.twitter.com/rI61n9daFQ— CM of Karnataka (@CMofKarnataka) June 19, 2023
“>
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ ರೂ. 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ಬೆಂಗಳೂರಿನಲ್ಲಿ ಇಂದು ವಿತರಿಸಿ ಅವರು ಮಾತನಾಡಿದರು.
ನಂತರ ಮಾತನಾಡಿದ ಅವರು, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯ. ಬಿಜೆಪಿಯ ದ್ವೇಷ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಸರ್ಕಾರ ಮಾಡಿದ್ದ ತಾರತಮ್ಯವನ್ನು ನಾವು ಸರಿಪಡಿಸಿದ್ದೇವೆ ಎಂದು ಹೇಳಿದರು.




