Friday, September 20, 2024

ಪ್ರಾಯೋಗಿಕ ಆವೃತ್ತಿ

ಪ್ರಾಸಿಕ್ಯೂಷನ್‌ಗೆ ಅನುಮತಿ| ಹೈಕೋರ್ಟ್ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಸಂಬಂಧಿಸಿದ ಆರೋಪದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಭಾರತೀಯ ಸಂವಿಧಾನದ 163ನೇ ವಿಧಿಯ ಅಡಿಯಲ್ಲಿ ಬದ್ಧವಾಗಿರುವ ಮಂತ್ರಿಗಳ ಮಂಡಳಿಯ ಸಲಹೆಯನ್ನು ಒಳಗೊಂಡಂತೆ, ಶಾಸನಬದ್ಧ ಆದೇಶಗಳನ್ನು ಉಲ್ಲಂಘಿಸಿ ಮತ್ತು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿ ಆದೇಶವನ್ನು ನೀಡಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

“ರಾಜ್ಯಪಾಲರ ನಿರ್ಧಾರವು ಕಾನೂನುಬದ್ಧವಾಗಿ ಸಮರ್ಥನೀಯವಲ್ಲ, ದೋಷಪೂರಿತವಾಗಿದೆ. ಬಾಹ್ಯ ಮೂಲಗಳ ಪ್ರೇರಣೆಯಿಂದ ಮಾಡಲಾಗಿದೆ” ಎಂದು ಕೂಡಾ ಸಿಎಂ ಹೈಕೋರ್ಟ್ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರ ಏಕಸದಸ್ಯ ಪೀಠ ಇಂದು ಮಧ್ಯಾಹ್ನ 2.30ಕ್ಕೆ ಅರ್ಜಿಯ ವಿಚಾರಣೆ ನಡೆಸಲಿದೆ. ಸಿಎಂ ಪರ ವಕೀಲ ರವಿವರ್ಮಾ ಕುಮಾರ್ ವಾದಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!