Sunday, November 22, 2026

ಪ್ರಾಯೋಗಿಕ ಆವೃತ್ತಿ

ನಾಳೆ ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 2 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 11:10 ಗಂಟೆಗೆ ಹೆಲಿಕಾಪ್ಟರ್ ಮೂಲಕ ಶ್ರೀರಂಗಪಟ್ಟಣ ಕಸಬಾ ಹೋಬಳಿಯ ತೂಬಿನಕೆರೆ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 11:15 ಗಂಟೆಗೆ ತೂಬಿನಕೆರೆ ಹೆಲಿಪ್ಯಾಡ್ ನಿಂದ ರಸ್ತೆ ಮೂಲಕ ಸಂಚರಿಸಲಿದ್ದಾರೆ.

ಬೆಳಿಗ್ಗೆ 11.25 ಗಂಟೆಗೆ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಹೋಬಳಿಯ ಅಲ್ಲಾಪಟ್ಟಣ ಗ್ರಾಮದಲ್ಲಿ ಶ್ರೀ ಅನ್ನದಾನೇಶ್ವರ ದೇವಾಲಯ ಅಭಿವೃದ್ಧಿ ಸಮಿತಿ (ರಿ.) ಹೆಬ್ಬಾಡಿಹುಂಡಿ ಮತ್ತು ಅಲ್ಲಾಪಟ್ಟಣ ಗ್ರಾಮಸ್ಥರಿಂಧ ಆಯೋಜಿಸಿರುವ ಶ್ರೀಅನ್ನದಾನೇಶ್ವರಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಮತ್ತು ಗೋಪುರ ಕುಂಭಾಭಿಷೇಕ ಹಾಗೂ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3:00 ಗಂಟೆಗೆ ಮಂಡ್ಯ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ಮತ್ತು ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 4:40 ಗಂಟೆಗೆ ರಸ್ತೆ ಮೂಲಕ ಕಸಬಾ ಹೋಬಳಿ ತೂಬಿನಕೆರೆ ಹೆಲಿಪ್ಯಾಡ್ ತಲುಪರಿದ್ದಾರೆ.

ಸಂಜೆ 04.45 ಗಂಟೆಗೆ ಹೆಲಿಕಾಪ್ಟರ್ ಮೂಲಕ ಹೊರಟು 5:25 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣ ತಲುಪರಿದ್ದಾರೆ ಎಂದು ಮುಖ್ಯ ಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ