Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಳೆ ನಾಗಮಂಗಲಕ್ಕೆ ಸಿಎಂ ಸಿದ್ದರಾಮಯ್ಯ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿಗೆ ನಾಳೆ (ಏ.22) ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಅವರೊಂದಿಗೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವ ಅವರು, ನಾಗಮಂಗಲ ತಾಲ್ಲೂಕಿನ ಅದ್ದಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿಂಭಾಗದ ಮೈದಾನದಲ್ಲಿನ ಹೆಲಿಪ್ಯಾಡ್ ನಲ್ಲಿ ಇಳಿಯಲಿದ್ದಾರೆ.

ನಂತರ ದೊಡ್ಡಬಾಲ ಗ್ರಾಮದ ಶ್ರೀಹುಚ್ಚಪ್ಪಸ್ವಾಮಿಯ 39 ವರ್ಷದ ನಂತರ ನಡೆಯುತ್ತಿರುವ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1.30 ಗಂಟೆಗೆ ಅದೇ ಹೆಲಿಪ್ಯಾಡ್ ನಿಂದಲೇ ವಾಪಸ್ ಆಗುವ ಮೂಲಕ ಬೆಂಗಳೂರಿನ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2 ಗಂಟೆಗೆ ಹೆಚ್.ಎ. ಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ