ಸಿ.ಎಂ. ಇಬ್ರಾಹಿಂ ಜೆಡಿಎಸ್ ಪಕ್ಷದ ಆಧ್ಯಕ್ಷರಾಗಿ ಆಧಿಕಾರ ಸ್ಬೀಕರಿಸಿದ್ದಾರೆ. ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆಯುತ್ತಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.
ಪಕ್ಷಕ್ಕೆ ಬಂದ ಆರಂಭದಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಆಧಿಕಾರ ಸ್ಬೀಕರಿಸಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ಇನ್ನೂ ಮುಂದೆ ಎಲ್ಲಾ ಕಡೆ ಜೆಡಿಎಸ್ ಪಕ್ಷಕ್ಕೆ ಸೇರಿಕೊಳ್ಳುತ್ತಾರೆ. ಬಿಜೆಪಿ ಮತ್ತು ಕಾಂಗ್ರೆಸಿನಲ್ಲಿ ಹೋರಾಟ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಾ ಕಾಂಗ್ರೆಸ್ ಸೇರಿದಂತೆ ಬಿಜೆಪಿ ವಿರುದ್ದ ವಾಗ್ದಾಳಿ ಮಾಡಿದರು.