Saturday, November 21, 2026

ಪ್ರಾಯೋಗಿಕ ಆವೃತ್ತಿ

ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಲು ಆಗ್ರಹ

ಕೊಬ್ಬರಿ ಬೆಲೆ ತೀವ್ರ ಕುಸಿತಗೊಂಡಿದ್ದು, ಕೂಡಲೇ ರಾಜ್ಯಾದ್ಯಂತ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ತೆಂಗು ಬೆಳೆಗಾರರು ಆಗ್ರಹಿಸಿದ್ದಾರೆ.

ನಾಗಮಂಗಲ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮುಖಂಡ ಕೃಷ್ಣೇಗೌಡ ಮಾತನಾಡಿ,  ತೆಂಗು ಬೆಳೆಗಾರರ ಕಷ್ಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಶೀಘ್ರವೇ ಧಾವಿಸಬೇಕು ಹಾಗೂ ಕೊಬ್ಬರಿ ಮೇಲಿನ ಜಿಎಸ್ಟಿ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.

ಈಗಾಗಲೇ ಅರಸೀಕೆರೆ, ಹಾಸನಗಳಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಬೆಳೆ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ, ಇನ್ನೂ ಹತ್ತು ದಿನಗಳೊಳಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು, ಕೊಬ್ಬರಿಗೆ ಕನಿಷ್ಟ ಇಪ್ಪತ್ತು ಸಾವಿರ ಬೆಂಬಲ ಬೆಲೆ ನಿಗದಿಗೊಳಿಸಬೇಕೆಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಮುಖಂಡರಾದ ರಾಜೇಗೌಡ, ಜವರೇಗೌಡ, ಬಾಲು ಚುಂಚನಹಳ್ಳಿ, ಆನಂದ್, ರವೀಂದ್ರ ಕೆ ಎಸ್ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ