ಬೂದನೂರು ಗ್ರಾಮ ಪಂಚಾಯಿತಿ ನಿವೇಶನ ರಹಿತ ಬಡ ಕುಟುಂಬದವರಿಗೆ ನಿವೇಶನ ಹಂಚುವ ಸಂಬಂಧ ಇದ್ದ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು.
ಸಭೆಯಲ್ಲಿ ಮೊದಲ ಹಂತದಲ್ಲಿ 48 ಆಯ್ಕೆಯಾಗಿರುವ ಫಲಾನುಭವಿಗಳಿಗೆ ರಾಜೀವ ಗಾಂಧಿ ವಸತಿ ನಿಗಮದ ವತಿಯಿಂದ ಹಕ್ಕುಪತ್ರ ನೀಡಲು ಜಿಲ್ಲಾಧಿಕಾರಿಗಳು ಶಿಪಾರಸ್ಸು ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಉಪ ವಿಭಾಗಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ಡಾ.ಶಿವಕುಮಾರ್ ಬಿರಾದರ, ತಾಲ್ಲೂಕು ಪಂಚಾಯಿತಿಯ ಇಒ ಎ.ಬಿ ವೇಣು ಸೇರಿದಂತೆ ಇನ್ನಿತರಿದ್ದರು.
ಸಭೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸ್ವಂತ ಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಬೂದನೂರು ಸತೀಶ್ ಅವರು, ಉಳಿದ ಫಲಾನುಭವಿಗಳಿಗೆ ಮುಂದಿನ ದಿನದಲ್ಲಿ ಸಮಸ್ಯೆ ಬಗೆಹರಿಸಿ ನಿವೇಶನ ವಿತರಿಸಲು ಸಭೆ ನಿರ್ಧರಿಸಿದೆ ಎಂದು ತಿಳಿಸಿದರು.
ಕಳೆದ 7 ವರ್ಷಗಳಿಂದ ಸ್ವಂತಮನೆ ನಮ್ಮಹಕ್ಕು ಹೋರಾಟ ಸಮಿತಿ ಹಾಗೂ ಆನೇಕ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳು ಹೋರಾಟ ನಡೆಸಿದ ಫಲವಾಗಿ ಜಿಲ್ಲಾಡಳಿತ ಹಕ್ಕುಪತ್ರ ಹಾಗೂ ನಿವೇಶನ ನೀಡಲು ಮುಂದಾಗಿದೆ.




