Thursday, September 19, 2024

ಪ್ರಾಯೋಗಿಕ ಆವೃತ್ತಿ

ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ಪ್ರಕರಣ| ತ್ವರಿತ ಇತ್ಯರ್ಥಕ್ಕೆ ಜಿಲ್ಲಾಧಿಕಾರಿ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ತ್ವರಿತ ಇತ್ರ‍್ಥಕ್ಕೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸೂಚನೆ ನೀಡಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ವಿಲೇವಾರಿ ವಿಳಂಬವಾಗುತ್ತಿದೆ. ಸಾಕ್ಷ್ಯ ಸಹಿತ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ  ಸರಿಯಾದ ಸಮಯಕ್ಕೆ ಸಲ್ಲಿಕೆ ಮಾಡಬೇಕು. ಆರೋಪಿ ಖುಲಾಸೆ ಆಗದಂತೆ ಎಚ್ಚರವಹಿಸಬೇಕು ಎಂದು ಪೊಲೀಸ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಕಳೆದ 2021 ರಲ್ಲಿ 58, 2022 ರಲ್ಲಿ 65 ಹಾಗೂ 2023 ರಲ್ಲಿ 53 ಪರಿಶಿಷ್ಟ ಜಾತಿ ಹಾಗೂ ಪಂಗಡದ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ ಎಂದರು.

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪ್ರತಿ ಮಾಹೆ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕುಂದು ಕೊರತೆ ಸಭೆ ಹಾಗೂ ದೌರ್ಜನ್ಯಕ್ಕೊಳಗಾದ ಸಂತ್ರಸ್ಥರ ಸಭೆ ನಡೆಸಬೇಕೆಂದು ಪೊಲೀಸ್ ಇಲಾಖೆಗೆ ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲೆ ನಡೆಯುವಂತಹ ದೌರ್ಜನ್ಯಗಳ ಬಗ್ಗೆ ಪ್ರಕರಣಗಳನ್ನು ದಾಖಲಿಸಿ, ನಿಗದಿತ ಸಮಯದೊಳಗೆ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ಬಗ್ಗೆ ಪರಿಶೀಲನೆ ಮಾಡಬೇಕು. ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ರ‍್ಕಾರದಿಂದ ಪರಿಹಾರ ಮಂಜೂರು ಮಾಡುವ ಬಗ್ಗೆ ಕ್ರಮ ವಹಿಸಬೇಕು ಎಂದರು‌.

ಪರಿಶಿಷ್ಟ ಜಾತಿ ಮತ್ತು ಪಂಗಡದ ದರ‍್ಜನ್ಯ ಪ್ರಕರಣದ ಸಾಕ್ಷಿದಾರರಿಗೆ ಸೂಕ್ತ ರಕ್ಷಣೆ ನೀಡಿ, ಅವಶ್ಯಕ ಸಾಕ್ಷ್ಯಾಧಾರಗಳನ್ನು ಒದಗಿಸಿ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಕ್ರಮವಹಿಸಬೇಕು. ಈ ಬಗ್ಗೆ ವಕೀಲರ ನೇತೃತ್ವದಲ್ಲಿ ಸಮಿತಿ ರಚಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡದವರ ದೌರ್ಜನ್ಯ ಪ್ರಕರಣಗಳ ಬಗ್ಗೆ ವಿಶೇಷ ಮಾಹಿತಿ ಪಡೆಯಿರಿ ಎಂದರು.

ಉಪ ವಿಭಾಗ ಹಾಗೂ ತಾಲ್ಲೂಕು ಮಟ್ಟದಲ್ಲಿ ನಡೆಯುವ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ಗಳನ್ನು ಸಾಧ್ಯವಾದಷ್ಟು ತಳಮಟ್ಟದಲ್ಲೇ ತಹಶೀಲ್ದಾರ್ ಹಾಗೂ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಜಂಟಿಯಾಗಿ ತನಿಖೆಮಾಡಿ ಪ್ರಕರಣ ಇತ್ಯರ್ಥಗೊಳಿಸಬೇಕು. ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ‍್ಯವಾಗಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರು ಮಾತನಾಡಿ, 2023 ರಲ್ಲಿ 53 ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಅದರಲ್ಲಿ 47 ಪ್ರಕರಣ ಇತ್ಯರ್ಥವಾಗಿದ್ದು, 16 ಪ್ರಕರಣ ತನಿಖೆಯಲ್ಲಿದೆ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಾಂಗದವರ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ ಕೂಡಲೇ ನೊಂದ ಸಂತ್ರಸ್ಥರಿಗೆ ಸರ್ಕಾರದಿಂದ ಕಾಲಮಿತಿಯೊಳಗೆ ಪರಿಹಾರ ಮಂಜೂರು ಮಾಡುವ ಸಂಬಂಧ ಪ್ರಥಮ ವರ್ತಮಾನ ವರದಿಯ ಪ್ರತಿಗಳನ್ನು ಪ್ರಕರಣ ದಾಖಲಾದ ದಿನದಂದೆ ಆಯಾಯ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸಲ್ಲಿಸಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ಧಲಿಂಗೇಶ್ ಮಾತನಾಡಿ, ದೌರ್ಜನ್ಯ ಪ್ರಕರಣಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಎಫ್.ಐ.ಆರ್ ಹಾಗೂ ದೋಷಾರೋಪ ಪಟ್ಟಿ ಸ್ವೀಕೃತವಾದ ಕೂಡಲೆ ನಿಯಮಾನುಸಾರ ಸಂತ್ರಸ್ಥರಿಗೆ ಎಫ್.ಐ.ಆರ್ ಹಾಗೂ ಚಾರ್ಜ್ ಶೀಟ್ ಹಂತದ ಪರಿಹಾರವನ್ನು ಮಂಜೂರು ಮಾಡಲು ಕ್ರಮವಹಿಸಲಾಗಿದೆ. ಅದರಂತೆ ಏಪ್ರಿಲ್ 2023 ರ ಮಾಹೆಯಿಂದ ಅಗಸ್ಟ್ 2023 ರ ಮಾಹೆಯ ಅಂತ್ಯಕ್ಕೆ ಒಟ್ಟು 36 ಪ್ರಕರಣಗಳ 73 ಸಂತ್ರಸ್ತರಿಗೆ ರೂ.61.59 ಲಕ್ಷಗಳ ಪರಿಹಾರವನ್ನು ಪಾವತಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಸಮಿತಿ ಸದಸ್ಯರಾದ ವೆಂಕಟಗಿರಿಯಯ್ಯ, ಗುರುಪ್ರಸಾದ್, ಚಂದ್ರಶೇಖರ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!