Wednesday, November 18, 2026

ಪ್ರಾಯೋಗಿಕ ಆವೃತ್ತಿ

ಏ.6 ರಿಂದ 27 ರವರೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ : ಡಾ.ಟಿ.ಎನ್.ಧನಂಜಯ

ಮಂಡ್ಯ ಜಿಲ್ಲಾ ಪಂಚಾಯತ್  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಏ.6 ರಿಂದ 27 ರವರೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.

ಏ.6 ರಂದು ಕೀಲಾರ ಪ್ರಾಥಮಿಕ ಆರೋಗ್ಯ ಕೇಂದ್ರ, 12 ರಂದು ಶಿವಳ್ಳಿ ಸರ್ಕಾರಿ ಆರೋಗ್ಯ ಕೇಂದ್ರ, 13 ರಂದು ಅರಕೆರೆ ಸರ್ಕಾರಿ ಆರೋಗ್ಯ ಕೇಂದ್ರ,15 ರಂದು ಬಸರಾಳು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 18 ರಂದು ಬಿಂಡಿಗನವಿಲೆ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಮಧ್ಯಾಹ್ನ 1 ಗಂಟೆಗೆ ನಾಗಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ, ಏ. 19 ರಂದು ಕೆ.ಎಂ.ದೊಡ್ಡಿ ಸರ್ಕಾರಿ ಆರೋಗ್ಯ ಕೇಂದ್ರ, 21 ರಂದು ಕಿರುಗಾವಲು ಸರ್ಕಾರಿ ಆರೋಗ್ಯ ಕೇಂದ್ರ, 25 ರಂದು ಮದ್ದೂರು ತಾಲ್ಲೂಕು ಆಸ್ಪತ್ರೆ, 26 ರಂದು ಪಾಂಡವಪುರ ಉಪವಿಭಾಗ ಆಸ್ಪತ್ರೆ ಮತ್ತು 27 ರಂದು ಕೆರೆಗೋಡು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಟಿ.ಎನ್.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ