Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | 4 ನೇ ವರ್ಷದ ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ

ಕೆ.ಆರ್.ಪೇಟೆ ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದ ಪುನೀತ್ ರಾಜಕುಮಾರ್ ಅವರ ಪುತ್ತಳಿಗೆ ವಿಶೇಷ ಪೂಜೆ ಸಲ್ಲಿಸಿ, ಅಪ್ಪು ಯುವ ಸಮಾಜ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ 4 ನೇ ವರ್ಷದ ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ ಮಾಡಲಾಯಿತು.

ಜೂನಿಯರ್ ಪುನೀತ್ ರಾಜಕುಮಾರ್ ವಡಕಹಳ್ಳಿ ಮಂಜೇಗೌಡ ಮಾತನಾಡಿ ತಮ್ಮ ಸಮಾಜ ಸೇವಾ ಕಾರ್ಯ ಚಟುವಟಿಕೆಗಳ ಮೂಲಕ ನಾಡಿನಾದ್ಯಂತ ಮನೆ ಮಾತಾಗಿದ್ದ ಪುನೀತ್ ರಾಜಕುಮಾರ್ ಒಬ್ಬ ಆದರ್ಶ ವ್ಯಕ್ತಿಯಾಗಿದ್ದು, ಯುವಜನರ ಸಾಧನಾ ಕಾರ್ಯಕ್ಕೆ ಪ್ರೇರಕ ಶಕ್ತಿಯಾಗಿದ್ದಾರೆ. ಸಮಾಜದಲ್ಲಿ ವಾಸಿಸುವ ನೊಂದವರು ಹಾಗೂ ತುಳಿತಕ್ಕೊಳಗಾದ ಬಡ ಜನರಿಗೆ ಕೈಲಾದ ಸಹಾಯ ಮಾಡುವ ಮೂಲಕ ಭಗವಂತನನ್ನು ಕಾಣುವ ಪ್ರಯತ್ನ ಮಾಡಬೇಕು ಎಂದರು.

ಕರ್ನಾಟಕ ರಕ್ಷಣಾ ವೇದಿಕೆಯ ಮಂಡ್ಯ ಜಿಲ್ಲಾಧ್ಯಕ್ಷ ವೇಣು ಮಾತನಾಡಿ ಹಸಿದ ಹೊಟ್ಟೆಗೆ ಅನ್ನ ನೀಡುವ ಕೆಲಸವು ದೇವರು ಮೆಚ್ಚುವ ಕಾರ್ಯವಾಗಿದೆ. ಸಮಾಜದಲ್ಲಿ ಯಾರೂ ಹಸಿವಿನಿಂದ ಬಳಲಬಾರದು. ಬಡವ-ಬಲ್ಲಿದ ಎಂಬ ಭೇದಭಾವವಿಲ್ಲದಂತೆ ಸಮಾಜದಲ್ಲಿ ವಾಸಿಸುವ ಎಲ್ಲಾ ಜಾತಿ, ವರ್ಗಗಳ ಜನರು ನೆಮ್ಮದಿಯ ಜೀವನ ನಡೆಸಬೇಕು ಎಂಬ ಹೊಂಗನಸನ್ನು ಹೊತ್ತಿದ್ದ ಪುನೀತ್ ರಾಜಕುಮಾರ್ ಅವರ ಆದರ್ಶ ಗುಣಗಳು ಯುವಶಕ್ತಿಯ ಮುನ್ನಡೆಗೆ ದಾರಿಮಾರ್ಗವಾಗಿದೆ ಎಂದರು.

ಪುನೀತ್ ರಾಜಕುಮಾರ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡೈಮಂಡ್ ಸಂತೋಷ್, ಅಪ್ಪು ಯುವ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಕಾಮನಹಳ್ಳಿ ಮಹೇಶ್, ಉಪಾಧ್ಯಕ್ಷ ಹರೀಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಕೆ.ಆರ್.ನೀಲಕಂಠ, ಮಹಿಳಾ ನಾಯಕರಾದ ಶಿವಮ್ಮ, ಲೀಲಾವತಿ, ಕರವೇ ತಾಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್, ನಿರಂಜನ, ರಾಮೇಗೌಡ, ಕೃಷ್ಣಮೂರ್ತಿ ಸೇರಿದಂತೆ ನೂರಾರು ಪುನೀತ್ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾವಿರಾರು ಜನರಿಗೆ ಅನ್ನಸಂತರ್ಪಣೆ ಮಾಡಲಾಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ