Friday, September 20, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಎಸ್ ನಲ್ಲಿ ‘ಕಾವೇರಿ ಆರತಿ’| ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರ ಜಲಾಶಯ (ಕೆ.ಆರ್.ಎಸ್) ದಲ್ಲಿ ‘ಗಂಗಾರತಿ’ಯ ಮಾದರಿಯಲ್ಲಿ ‘ಕಾವೇರಿ ಆರತಿ’ ನಡೆಸುವ ಬಗ್ಗೆ ಸರ್ಕಾರ ಆಸಕ್ತಿ ವಹಿಸಿದ್ದು, ಈ ಬಗ್ಗೆ ಸೂಕ್ತ ಅಧ್ಯಯನ ನಡೆಸಲು ಮಂಡ್ಯ ಜಿಲ್ಲಾ ಉಸ್ತುವಾರಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಹಳೇ ಮೈಸೂರು ಭಾಗದ ಸ್ಥಳೀಯ ಜನಪ್ರತಿನಿಧಿಗಳು, ರೈತರು ಹಾಗೂ ನಾಗರೀಕರು ರಾಜ್ಯದ ಜೀವನದಿ ಕಾವೇರಿ ಮಾತೆಗೆ ನಮನ ಹಾಗೂ ಪೂಜೆ ಸಲ್ಲಿಸಲು ಉತ್ತರ ಭಾರತದ ವಾರಣಾಸಿಯ ಗಂಗಾ ನದಿಗೆ ನಡೆಸುವ  ಗಮನ ಸೆಳೆದಿದ್ದಾರೆ. ಇದರಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರ ಜೊತೆಗೆ ನಮ್ಮ ಸಂಸ್ಕೃತಿ ವರಂಪರೆ ಸಂರಕ್ಷಿಸುವ ಹಾಗೂ ಧಾರ್ಮಿಕ ಭಾವನೆಗಳನ್ನು ಗೌರವಿಸಲು ಅನುವಾಗುತ್ತದೆ.

ಮೈಸೂರು ಮಂಡ್ಯ ಹಾಗೂ ಕೂಡಗು ಜಿಲ್ಲೆಯ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಧಾರ್ಮಿಕ ಮತ್ತು ‘ದತ್ತಿ ಇಲಾಖೆ ಜಲಸಂಪನ್ಮೂಲ ಇಲಾಖೆ, ಪ್ರವಾಸೊದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ, ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ‘ಗಂಗಾರತಿ’ಯ ಮಾದರಿಯಲ್ಲಿ ಕಾವೇರಿ ನದಿಗೆ ‘ಕಾವೇರಿ ಆರತಿ ನಡೆಸುವ ಬಗ್ಗೆ, ಅಧ್ಯಯನ ನಡೆಸಿ ಒಂದು ತಿಂಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!