Friday, September 20, 2024

ಪ್ರಾಯೋಗಿಕ ಆವೃತ್ತಿ

ಭ್ರಷ್ಟಾಚಾರ : ಲೋಕಾಯುಕ್ತರಿಂದ ದೂರು ಸ್ವೀಕಾರ

ಮಂಡ್ಯ ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೆ.30 ರಂದು ಬೆಳಿಗ್ಗೆ  11 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ಸಾರ್ವಜನಿಕರಿಂದ ದೂರು ಸ್ವೀಕಾರ ಮಾಡಲಿದ್ಧಾರೆ.

ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದರೆ ಸಾರ್ವಜನಿಕರು ನೀಡಬಹುದು, ಈ ಕುಂದುಕೊರತೆ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ  ಪೊಲೀಸ್ ಅಧೀಕ್ಷಕ ಪುಟ್ಟಮಾದಯ್ಯ, ಡಿವೈಎಸ್ಪಿ ಟಿ.ಆರ್. ರಾಜಶೆಟ್ಟಿ ಮತ್ತು ಪೊಲೀಸ್ ಇನ್ಸ್‍ಪೆಕ್ಟರ್ ಜಿ.ಕೆ.ಪ್ರಕಾಶ್  ಪಾಲ್ಗೊಳಲಿದ್ದಾರೆ.

ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು, ಅಹವಾಲು ಗಳೇನಾದರೂ ಇದ್ದಲ್ಲಿ ಖುದ್ದಾಗಿ ಭೇಟಿ ಮಾಡಿ ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತದ ಮಂಡ್ಯ ಉಪಾಧೀಕ್ಷಕ ಟಿ.ಆರ್.ರಾಜಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!