Thursday, September 19, 2024

ಪ್ರಾಯೋಗಿಕ ಆವೃತ್ತಿ

ಗಣೇಶ ವಿಸರ್ಜನೆ ವೇಳೆ ಲೈಂಗಿಕ ದೌರ್ಜನ್ಯ | ಸಿ.ಪಿ.ಯೋಗೇಶ್ವರ್ ಆಪ್ತ, ಬಿಜೆಪಿ ಮುಖಂಡ ರಾಜು ವಿರುದ್ದ ದೂರು

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ ಎಸ್ ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ.

ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆಯೊಬ್ಬರು ಟಿ ಎಸ್ ರಾಜು ವಿರುದ್ಧ ದೂರು ನೀಡಿದ್ದಾರೆ. ಆರೋಪಿ ರಾಜು ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಅವರ ಆಪ್ತ ಎನ್ನಲಾಗಿದ್ದು, ಘಟನೆ ಬೆನ್ನಲ್ಲೇ ರಾಜು ತಲೆಮರೆಸಿಕೊಂಡಿದ್ದಾನೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ, ಇತ್ತ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ ಎನ್ ಆನಂದಸ್ವಾಮಿ ಅವರು ಸೋಮವಾರ ರಾಜುನನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಘಟನೆ ವಿವರ

ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ ಗಣೇಶ ಹಬ್ಬದ ಸಲುವಾಗಿ ತವರು ಮನೆಗೆ ಬಂದಿದ್ದರು. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಲುವಾಗಿ ಮೆರವಣಿಗೆ ನಡೆಯುವಾಗ ಮಹಿಳೆ ರಾತ್ರಿ 11.40ರ ಸುಮಾರಿಗೆ ತಾಯಿಯೊಂದಿಗೆ ಮನೆ ಮುಂದೆ ನಿಂತಿದ್ದರು. ತಾಯಿ ಕಾರ್ಯನಿಮಿತ್ತ ಒಳಕ್ಕೆ ಹೋಗಿದ್ದರು. ಮಹಿಳೆ ಒಬ್ಬರೇ ಇದ್ದಿದ್ದನ್ನು ಗಮನಿಸಿ ಅವರತ್ತ ಬಂದಿದ್ದ ರಾಜು, ‘ಯಾವಾಗ ಬಂದೆ ಬೇಬಿ’ ಎಂದು ಕೇಳಿದ್ದ ಎಂದು ಮಹಿಳೆ ದೂರಿನಲ್ಲಿಉಲ್ಲೇಖಿಸಿದ್ದಾರೆ.

ಮಹಿಳೆಯ ಹೆಗಲ ಮೇಲೆ ಕೈ ಹಾಕಿ ಎದೆ ಭಾಗವನ್ನು ಮುಟ್ಟುತ್ತಾ, ಕಾಮುಕ ದೃಷ್ಟಿಯಿಂದ ಕೈ ಹಿಡಿದು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಮೊಬೈಲ್‌ ಫೋನ್‌ನಿಂದ ಮಹಿಳೆಯ ಫೋಟೊ ತೆಗೆದು ತನ್ನ ಸ್ನೇಹಿತರಿಗೆ ಕಳಿಸಿದ್ದ. ಈ ಕುರಿತು ಮಹಿಳೆ ಪ್ರಶ್ನಿಸಿದಾಗ, ‘ನನ್ನ ಮೊಬೈಲ್, ನನ್ನಿಷ್ಟ’ ಎಂದು ರಾಜು ಕೆಟ್ಟದಾಗಿ ಪ್ರತಿಕ್ರಿಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ರಾಜು ವರ್ತನೆಯಿಂದ ದಿಗ್ಬ್ರಮೆಗೊಂಡ ಮಹಿಳೆ ತಕ್ಷಣ ಒಳಗಿದ್ದ ತನ್ನ ಅಣ್ಣನಿಗೆ ವಿಷಯ ತಿಳಿಸಿದ್ದಾರೆ. ಅವರು ಬಂದು ಪ್ರಶ್ನಿಸಿದಾಗ, ರಾಜು ತಬ್ಬಿಬ್ಬುಗೊಂಡಿದ್ದಾನೆ. ನಂತರ, ಕುಟುಂಬದವರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ, ಆತನ ಮೊಬೈಲ್ ಕಿತ್ತಕೊಂಡು ಇಟ್ಟುಕೊಂಡಿದ್ದು, ತನಿಖೆ ಸಂದರ್ಭದಲ್ಲಿ ಹಾಜರುಪಡಿಸುವುದಾಗಿ ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

ಹಿಂದೆಯೂ ಕಿರಿ ಕಿರಿ

ಈ ಹಿಂದೆಯೂ ರಾಜು ನನಗೆ ಕಿರಿಕಿರಿ ಕೊಟ್ಟಿದ್ದಾನೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನನಗೆ ಕರೆ ಮಾಡಿ, ‘ಮೈಸೂರು ಕಾಫಿ ಡೇಗೆ ಹೋಗೋಣ. ನೀನೊಬ್ಬಳೇ ಬಾ. ಯಾರಿಗೂ ಹೇಳಬೇಡ’ ಎಂದಿದ್ದ. ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡಿರುವ ರಾಜು, ನನ್ನ ಗೌರವಕ್ಕೆ ಚ್ಯುತಿ ತಂದಿದ್ದಾನೆ” ಎಂದು ಮಹಿಳೆ ಆರೋಪಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!