Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕಾಲ್ತುಳಿತ ಪ್ರಕರಣ | ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು

ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ RCB ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ಪೊಲೀಸರಿಗೆ ಶುಕ್ರವಾರ ದೂರು ನೀಡಲಾಗಿದೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ RCB, KSCA, DNA ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

ಇದೀಗ ವಿರಾಟ್ ಕೊಹ್ಲಿ ವಿರುದ್ಧವೂ ಎಫ್​ಐಆರ್ ದಾಖಲಿಸುವಂತೆ ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ. ಅಲ್ಲದೆ ಈ ಸಂಬಂಧ ನೈಜ ಹೋರಾಟಗಾರರ ವೇದಿಕೆಯ ಎಚ್ ಎಂ ವೆಂಕಟೇಶ್ ಅವರು ವಿರಾಟ್ ಕೊಹ್ಲಿ ವಿರುದ್ಧ ದೂರು ನೀಡಿದ್ದಾರೆ.

ಮೊದಲು ದೂರು ಸ್ವೀಕರಿಸಲು ಹಿಂದೇಟು ಹಾಕಿದ ಕಬ್ಬನ್ ಪಾರ್ಕ್ ಪೊಲೀಸರು, ಹಲವು ಗಂಟೆಗಳ ಬಳಿಕ ಕೊನೆಗೂ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಈಗಾಗಲೇ ದಾಖಲಾಗಿರುವ ಎಫ್ಐಆರ್ ಜತೆ ಇದನ್ನು ಪರಿಗಣಿಸುವುದಾಗಿ ಹಿಂಬರಹ ನೀಡಿದ್ದಾರೆ.

ಮೊದಲ ಬಾರಿ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ